ಬೆಂಗಳೂರು:ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಕಾರಣ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದರು. ಇದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಭಾಗಿಯಾಗಿದ್ದರು.
ಕಳೆದ ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಕೆಲವೊಂದು ಗಡಿ ಜಿಲ್ಲೆಗಳಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚಾಗಿರುವ ಕಾರಣ ನಮೋ ಪ್ರತ್ಯೇಕ ಕಾರ್ಯತಂತ್ರ ರೂಪಿಸುವಂತೆ ಸಿಎಂಗೆ ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಬೆಂಗಳೂರು, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜತೆಗಿನ ವಿಡಿಯೋ ಕಾನ್ಫರೆನ್ಸ್ ನಂತರ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಬಿಎಸ್ವೈ, ರಾಜ್ಯದಲ್ಲಿ ಲಾಕ್ಡೌನ್ ಮತ್ತು ಕರ್ಫ್ಯೂ ಜಾರಿ ಮಾಡಲ್ಲ. ಆದರೆ ಸೂಕ್ತ ಮಾರ್ಗಸೂಚಿ ಅನುಸರಣೆ ಮಾಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಟೆಸ್ಟಿಂಗ್ ಹೆಚ್ಚಿಸಿ, ಜನರು ಆತಂಕಗೊಳ್ಳದಂತೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂಗಳಿಗೆ ಮೋದಿ ಮಹತ್ವದ ಸೂಚನೆ
ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ಕಾರಣ ಗಡಿ ಜಿಲ್ಲೆಗಳಾದ ಕಲಬುರಗಿ, ಬೀದರ್ ಹಾಗೂ ಬೆಂಗಳೂರು ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದ್ದಾರೆ ಎಂದಿರುವ ಬಿಎಸ್ವೈ, ಪ್ರಕರಣ ಹೆಚ್ಚಿರುವ ಜಿಲ್ಲೆಗಳಲ್ಲಿ ಟೆಸ್ಟಿಂಗ್, ಲಸಿಕೆ ಹೆಚ್ಚಳಕ್ಕೆ ಪಿಎಂ ಸೂಚಿಸಿದ್ದಾರೆ ಎಂದರು. ಇದೇ ವೇಳೆ ಪ್ರತಿ ದಿನ 3 ಲಕ್ಷ ಕೋವಿಡ್ ವ್ಯಾಕ್ಸಿನ್ ಹಾಕುವ ಗುರಿ ಹೊಂದಲಾಗಿದೆ ಎಂದು ಮೋದಿ ಅವರಿಗೆ ತಿಳಿಸಿದ್ದಾಗಿ ಹೇಳಿದ್ದು, ಅದಕ್ಕಾಗಿ 2 ಸಾವಿರ ಸೆಂಟರ್ ಆಯ್ಕೆ ಮಾಡಲಾಗಿದೆ. ಇದರಲ್ಲಿ 1400 ಸೆಂಟರ್ಗಳು ತಮ್ಮ ಕಾರ್ಯ ಆರಂಭಿಸಬೇಕಾಗಿದೆ ಎಂದಿದ್ದಾರೆ. ಜತೆಗೆ ಬೆಂಗಳೂರಿನಲ್ಲಿ ಮೂರು ಕೋವಿಡ್ ಕೇರ್ ಸೆಂಟರ್ ತೆರೆಯಲು ನಿರ್ಧರಿಸಲಾಗಿದೆ ಎಂದರು.