ಬೆಂಗಳೂರು: ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮರಿಗೆ ಕೊರೊನಾ ಸೋಂಕು ತಗುಲಿದ್ದು, ಸದ್ಯ ಮನೆಯಲ್ಲಿ ಐಸೋಲೇಷನ್ಗೊಳಗಾಗಿದ್ದಾರೆ. ಇವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಹೆಚ್ಡಿಡಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಪತ್ನಿ ಚೆನ್ನಮ್ಮಗೆ ಕೊರೊನಾ ಪಾಸಿಟಿವ್; ಆರೋಗ್ಯ ವಿಚಾರಿಸಿದ ಮೋದಿ
ನನ್ನಗೆ ಕರೆ ಮಾಡಿ ಆರೋಗ್ಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಚಾರಿಸಿದ್ದಕ್ಕಾಗಿ ಅವರಿಗೆ ನಾನು ಆಭಾರಿಯಾಗಿದ್ದೇನೆ. ನನ್ನ ಆಯ್ಕೆಯ ಯಾವುದೇ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿರಿ ಎಂದಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ನಾನು ಪ್ರಧಾನಿಯವರಿಗೆ ಭರವಸೆ ನೀಡಿದ್ದೇನೆ ಎಂದು ದೇವೇಗೌಡರು ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಮಾಜಿ ಪ್ರಧಾನಿ ದಂಪತಿಗೆ ಕೊರೊನಾ ಸೋಂಕು ದೃಢವಾಗುತ್ತಿದ್ದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶುಭ ಹಾರೈಸಿದ್ದಾರೆ.