ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಮೋಘ ವಿಜಯ ದಾಖಲಿಸಿದ ಕಾಂಗ್ರೆಸ್ ಪಕ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ. ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅವರಿಗೆ ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು; ಪ್ರಧಾನಿ ಮೋದಿ ಅಭಿನಂದನೆ - ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
Etv Bharat
ಕರ್ನಾಟಕ ಚುನಾವಣೆಯಲ್ಲಿ ನಮಗೆ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ಪ್ರಶಂಸಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ಕರ್ನಾಟಕಕ್ಕೆ ಸೇವೆ ಸಲ್ಲಿಸುತ್ತೇವೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು ಎಂದು ಟ್ವೀಟ್ನಲ್ಲಿ ಪ್ರಧಾನಿ ತಿಳಿಸಿದ್ದಾರೆ.
ಇದನ್ನೂ ಓದಿ:ಕರ್ನಾಟಕದಲ್ಲಿ ಕಾಂಗ್ರೆಸ್ ಗೆಲುವಿಗೆ ಈ ಅಂಶಗಳು ಕಾರಣವೇ?