ಕರ್ನಾಟಕ

karnataka

ETV Bharat / state

10 ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ : ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿ - ಮುಖ್ಯಮಂತ್ರಿ ಯಡಿಯೂರಪ್ಪ

ಕೊರೊನಾ ಹೆಚ್ಚಿರುವ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಸಭೆ ನಡೆಸುತ್ತಿದ್ದಾರೆ.

PM modi
ಸಿಎಂ ಜೊತೆ ಮೋದಿ ಸಭೆ

By

Published : Apr 23, 2021, 8:59 AM IST

Updated : Apr 23, 2021, 10:28 AM IST

ಬೆಂಗಳೂರು: ದೇಶದಲ್ಲಿ ಕೊರೊನಾ ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಸಂವಾದ ನಡೆಸುತ್ತಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಸಭೆಯಲ್ಲಿ ಭಾಗವಹಿಸಿದ್ದಾರೆ.

ಬೆಳಗ್ಗೆ 10 ಗಂಟೆಗೆ ಪ್ರಾರಂಭವಾದ 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗಿನ ಸಂವಾದದಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಸಹ ಭಾಗಿಯಾಗಿದ್ದಾರೆ.

ರಾಜ್ಯದಲ್ಲಿ ಜಾರಿಗೆ ತಂದಿರುವ ಕಠಿಣ ಮಾರ್ಗಸೂಚಿ, ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದು, ಹೆಚ್ಚುತ್ತಿರುವ ಕೋವಿಡ್ ನಿಯಂತ್ರಣಕ್ಕೆ ಏನೆಲ್ಲಾ ಮಾಡಲಾಗುತ್ತಿದೆ ಎನ್ನುವ ಕುರಿತು ವಿವರಣೆ ನೀಡಲಿದ್ದಾರೆ. ಜೊತೆಗೆ ರಾಜ್ಯದಲ್ಲಿನ ಬೆಡ್ ಕೊರತೆ, ಆಕ್ಸಿಜನ್ ಲಭ್ಯತೆ, ಔಷಧಿ ಪೂರೈಕೆ ಸ್ಥಿತಿಗತಿ ಕುರಿತು ರಾಜ್ಯದಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ವ್ಯಾಕ್ಸಿನೇಷನ್‌ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತಿದೆ.

Last Updated : Apr 23, 2021, 10:28 AM IST

ABOUT THE AUTHOR

...view details