ಬೆಂಗಳೂರು: ಕೊರೊನಾ ನಿಯಂತ್ರಣ ಕುರಿತು ಪ್ರಧಾನಿ ನರೇಂದ್ರ ಮೋದಿ ನಾಳೆ ಮತ್ತೊಮ್ಮೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಸಂವಾದಕ್ಕೂ ಮುನ್ನ ಸಿಎಂ ಸಚಿವರು ಹಾಗು ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಸಚಿವರು, ಅಧಿಕಾರಿಗಳ ಸಭೆ ನಡೆಸಿದ ಸಿಎಂ ಬಿಎಸ್ವೈ ಡಿಸಿಎಂಗಳಾದ ಅಶ್ವತ್ಥ ನಾರಾಯಣ್, ಗೋವಿಂದ ಕಾರಜೋಳ, ಸಚಿವರಾದ ಸುರೇಶ್ ಕುಮಾರ್, ಆರ್.ಅಶೋಕ್, ಸುಧಾಕರ್ ಹಾಗು ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ನಾಳೆ ಮಧ್ಯಾಹ್ನ 3 ಗಂಟೆ ನಂತರ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ 5 ಬಾರಿಗೆ ವಿಡಿಯೋ ಸಂವಾದ ನಡೆಸಲಿದ್ದು, ಸಂವಾದದಲ್ಲಿ ರಾಜ್ಯದ ಸ್ಥಿತಿಗತಿ ಕುರಿತು ಮಾಹಿತಿ ನೀಡಲು ಪೂರಕವಾಗಿ ಸಿಎಂ ಮಾಹಿತಿ ಸಂಗ್ರಹ ಮಾಡಿದರು.
ಲಾಕ್ಡೌನ್ ಸಡಿಲಿಕೆ ನಂತರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದೆಯಾ? ಸಡಿಲಿಕೆಯಿಂದ ಸಮಸ್ಯೆ ಆಗಿದೆಯಾ? ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ನಂತರದ ಸ್ಥಿತಿಗತಿ, ರೆಡ್ಜೋನ್ ಹಾಗು ಕಂಟೈನ್ಮೆಂಟ್ ವಲಯದ ನಿಯಂತ್ರಣ, ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ, ಕೋವಿಡ್ ನಿಯಂತ್ರಣ ಪ್ರಮಾಣ ಸೇರಿದಂತೆ ಸವಿಸ್ತಾರವಾಗಿ ಮಾತುಕತೆ ನಡೆಸಲಾಯಿತು.