ಬೆಂಗಳೂರು:ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ರನ್ ವೇ ಉದ್ಘಾಟನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರಕ್ಕೆ ಆಗಮಿಸುತ್ತಿದ್ದು, ಭದ್ರತೆ ದೃಷ್ಟಿಯಿಂದ ಸುಮಾರು 6 ಸಾವಿರ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ತಿಳಿಸಿದರು.
ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಹೆಚ್ಎಎಲ್ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ, ವಿಧಾನಸೌಧ ಮುಂಭಾಗದ ಕನಕದಾಸ ಪುತ್ಥಳಿ ಅನಾವರಣ ಹಾಗೂ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ವಂದೇ ಮಾತರಂ ರೈಲಿಗೆ ಹಸಿರು ನಿಶಾನೆ ತೋರಿಸಲಿದ್ದಾರೆ. ಬಳಿಕ ಬೆಂಗಳೂರು ಏರ್ ಪೋರ್ಟ್ನಲ್ಲಿ ಎರಡನೇ ರನ್ ವೇ ಉದ್ಘಾಟನೆ ಹಾಗೂ 108 ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಗೊಳಿಸುವರು ಎಂದರು.