ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಮೈಸೂರು-ಬೆಂಗಳೂರು ದಶಪಥ ರಸ್ತೆಯ ವಿಡಿಯೋಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.
"ಕರ್ನಾಟಕದಲ್ಲಿ ವಿಶ್ವದರ್ಜೆಯ ಮೂಲಸೌಕರ್ಯ ಹಾಗೂ ಬೆಳವಣಿಗೆಯ ಅದ್ಭುತ ದೃಶ್ಯ. ಡಬಲ್ ಇಂಜಿನ್ ಸರ್ಕಾರ ರಾಜ್ಯದಲ್ಲಿ ಚಮತ್ಕಾರ ಮಾಡಿದೆ' ಎಂದಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿರುವ ಟ್ವೀಟ್ಗೆ ಪ್ರಧಾನಿ ಮೋದಿಯ ಪ್ರತಿಕ್ರಿಯೆ ನೀಡುತ್ತಾ, 'ನಮ್ಮ ಜನ ಅತ್ಯುತ್ತಮ ಮೂಲಸೌಕರ್ಯಕ್ಕೆ ಅರ್ಹರಿದ್ದಾರೆ. ಮೂಲಸೌಕರ್ಯ ಅಭಿವೃದ್ಧಿಯಲ್ಲಿ ನಮ್ಮ ಕೆಲಸ ವ್ಯಾಪಕವಾಗಿ ಮೆಚ್ಚುಗೆಗೆ ಪಾತ್ರವಾಗಿದೆ" ಎಂದಿದ್ದಾರೆ.
ಜನವರಿ ತಿಂಗಳಿನಲ್ಲಿ 6085 ಕೋಟಿ ರೂ. ಜಿ.ಎಸ್.ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ. ಜಿಎಸ್ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ. 30 ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದಾಗಿ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರವು ಈ ವರ್ಷ ಉತ್ತಮ ಆಯವ್ಯಯ ಮಂಡಿಸಲು ಅನುವು ಮಾಡಿಕೊಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಅಮಿತ್ ಶಾಗೆ ಬಿಗಿ ಭದ್ರತೆ:ಈಶ್ವರಮಂಗಲದ ಹನುಮಗಿರಿಯ ಶ್ರೀ ಪಂಚಮುಖಿ ಆಂಜನೇಯ ಕ್ಷೇತ್ರದ ಶ್ರೀ ಕೋದಂಡರಾಮನ ಸನ್ನಿಧಿಯಾಗಿರುವ ಅಮರಗಿರಿಯಲ್ಲಿ ನಿರ್ಮಾಣಗೊಂಡಿರುವ ಶ್ರೀ ಭಾರತಿ ಅಮರಜ್ಯೋತಿ ಮಂದಿರ ಥೀಮ್ಪಾರ್ಕ್ ಅನ್ನು ಲೋಕಾರ್ಪಣೆ ಮಾಡಲು ರಾಜಕೀಯ ಚಾಣಕ್ಯ ಖ್ಯಾತಿಯ ಕೇಂದ್ರ ಗೃಹಮಂತ್ರಿ ಅಮಿತ್ ಶಾರವರು ಇನ್ನು ಕೆಲವೇ ಕ್ಷಣಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆ ಈಶ್ವರಮಂಗಲ ಹಾಗೂ ಹನುಮಗಿರಿ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಕೇಂದ್ರ ಸಚಿವ ಅಮಿತ್ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಸೇರಿ ಪ್ರಮುಖರ ಭೇಟಿಯ ಹಿನ್ನೆಲೆ ಈಶ್ವರಮಂಗಲ, ಹನುಮಗಿರಿ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಹನುಮಗಿರಿಗೆ ಹೋಗುವ ಪ್ರವೇಶ ದ್ವಾರದಿಂದಲೇ ಪೊಲೀಸರು ಬ್ಯಾರಿಕೇಡ್ ಅಳವಡಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಥಳದಲ್ಲಿ ಎಸ್.ಪಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳ ತಂಡ ಭೇಟಿ ನೀಡಿ ಬಂದೋಬಸ್ತ್ ಬಗ್ಗೆ ಮಾಹಿತಿ ಸಂಗ್ರಹಿಸುದ್ದಾರೆ. ಓರ್ವ ಎಸ್.ಪಿ, ಐವರು ಡಿವೈಎಸ್‌ಪಿಗಳು, 10 ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಸುಮಾರು 500 ಕ್ಕೂ ಹೆಚ್ಚು ಪೊಲೀಸ್, ಗೃಹರಕ್ಷಕ ಸಿಬ್ಬಂದಿಗಳನ್ನು ಇಲ್ಲಿ ಭದ್ರತೆಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ.
ಹನುಮಗಿರಿಯ ಶ್ರೀ ಗಜಾನನ ವಿದ್ಯಾಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್‌ನಲ್ಲಿ ಇಳಿಯಲಿರುವ ಶಾ ಅವರು ಅಲ್ಲಿಂದ ಕಾರಿನಲ್ಲಿ ಹನುಮಗಿರಿ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ಕ್ಷೇತ್ರದ ದ್ವಾರದ ತನಕ ಆಗಮಿಸಲಿದ್ದಾರೆ. ನಂತರದಲ್ಲಿ ಅವರು ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ದರ್ಶನ ಮಾಡಲಿದ್ದಾರೆ. ನಂತರ ಅಮರಗಿರಿಗೆ ಆಗಮಿಸುವ ಶಾ ಅವರು ಶ್ರೀ ಭಾರತಿ ಅಮರಜ್ಯೋತಿ ಮಂದಿರದ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ಮತ್ತೆ ಕಾರಿನಲ್ಲಿ ಹೆಲಿಪ್ಯಾಡ್‌ಗೆ ಬಂದು ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಹೊರಡಲಿದ್ದಾರೆ.
ಓದಿ:ಏರೋ ಇಂಡಿಯಾ 2023: ಅತಿಗಣ್ಯ ವ್ಯಕ್ತಿಗಳ ಆಗಮನ- ಬೆಂಗಳೂರು ನಗರ ಸಂಪರ್ಕಿಸುವ ಮಾರ್ಗಗಳಲ್ಲಿ ಬದಲಾಣೆ