ಕರ್ನಾಟಕ

karnataka

ETV Bharat / state

ಕೊಮ್ಮಘಟ್ಟದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಮೋದಿ - ಕೊಮ್ಮಘಟ್ಟದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ ಮೋದಿ

ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಕೊಮ್ಮಘಟ್ಟದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಮೋದಿ
ಕೊಮ್ಮಘಟ್ಟದಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಮೋದಿ

By

Published : Jun 20, 2022, 4:12 PM IST

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರು ನಗರದ ಕೊಮ್ಮಘಟ್ಟಕ್ಕೆ ಭೇಟಿ ನೀಡಿ, ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿದರು. ಸಬ್ ಅರ್ಬನ್ ರೈಲ್ವೆ ಯೋಜನೆಯ ಅಂಚೆ ಚೀಟಿ ಬಿಡುಗಡೆ ಮಾಡಿದರು. ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳ ಯೋಜನೆಗಳ ಪ್ರದರ್ಶನವನ್ನು ವೀಕ್ಷಿಸಿ, ಬೆಂಗಳೂರಿನ ಸರ್. ಎಂ.ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್, ಯಲಹಂಕ- ಪೆನುಕೊಂಡ ಮತ್ತು ಅರಸೀಕೆರೆ-ತುಮಕೂರು ಜೋಡಿ ರೈಲು ಮಾರ್ಗ ಹಾಗೂ 100% ವಿದ್ಯುದೀಕರಣಗೊಂಡ ಕೊಂಕಣ ರೈಲು ಮಾರ್ಗವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು.

ತುಮಕೂರು, ಅರಸೀಕೆರೆ, ಯಲಹಂಕ, ರತ್ನಗಿರಿ, ಮಡಗಾಂವ್ ಮತ್ತು ಉಡುಪಿಗೆ ಹೊಸ ರೈಲು ಸೇವೆಗೆ ವಿಡಿಯೋ ಲಿಂಕ್‌ ಮೂಲಕ ಹಸಿರು ನಿಶಾನೆಯನ್ನು ತೋರಿದರು. ಬೆಂಗಳೂರು ಉಪ ನಗರ ರೈಲು ಯೋಜನೆ, ಬೆಂಗಳೂರು ಕಂಟೋನ್‌ಮೆಂಟ್ ರೈಲು ನಿಲ್ದಾಣ ಮತ್ತು ಯಶವಂತಪುರ ರೈಲು ನಿಲ್ದಾಣದ ಪುನರಾಭಿವೃದ್ಧಿ, ಬೆಂಗಳೂರಿನ ವರ್ತುಲ ರಸ್ತೆ-2 ಪ್ಯಾಕೇಜ್‌ಗಳು, ನೆಲಮಂಗಲ ತುಮಕೂರು ವಿಭಾಗದ 6-ಲೈನಿಂಗ್, NH-73 ರ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಭಾಗದವರೆಗೂ ರಸ್ತೆ ಅಗಲೀಕರಣ, NH-69 ರ ಮಧುಗಿರಿ-ಗೌರಿಬಿದನೂರು-ಚಿಕ್ಕಬಳ್ಳಾಪುರ ವಿಭಾಗದ ಪುನರ್ವಸತಿ ಮತ್ತು ಉನ್ನತೀಕರಣ, ಬೆಂಗಳೂರಿನಲ್ಲಿ ಮಲ್ಟಿ ಮಾಡೆಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು. ಹಾಗೆ ಬೆಂಗಳೂರು ಉಪ ನಗರ ರೈಲು ಯೋಜನೆಯ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮಗಳಿಗೆ ಚಾಲನೆ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೊಹ್ಲೋಟ್, ಕೇಂದ್ರ ಮಂತ್ರಿಗಳಾದ ಪ್ರಹ್ಲಾದ್ ಜೋಶಿ, ಸಂಸದರಾದ ಪಿ.ಸಿ. ಮೋಹನ್, ಡಿ.ವಿ. ಸದಾನಂದಗೌಡ, ಎಲ್.ಎಸ್. ತೇಜಸ್ವಿ ಸೂರ್ಯ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್ ಸೇರಿದಂತೆ ಅಧಿಕಾರಿಗಳು, ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.

ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ: ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಡಾ. ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯಲ್ಲಿ ನಿರ್ಮಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿಯನ್ನು ಅನಾವರಣಗೊಳಿಸಿದರು.

ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ:

ಐಐಎಸ್ಸಿಯಲ್ಲಿನ ಮೊದಲ ಕಾರ್ಯಕ್ರಮ ಮುಗಿಸಿ ಅಲ್ಲಿಂದ ನೇರವಾಗಿ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಗೆ ಆಗಮಿಸಿದ ಪಿಎಂ ಮೋದಿ, ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣಗೊಳಿಸಿದರು. ನಂತರ ಡಾ. ಬಿ. ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಮಾಡಿದರು. ಬಳಿಕ ಉನ್ನತೀಕರಿಸಿದ ರಾಜ್ಯದ ಒಟ್ಟು 150 ಐಟಿಐ ಸಂಸ್ಥೆಗಳ ಲೋಕಾರ್ಪಣೆ ಮಾಡಿದರು. ಅಲ್ಲಿಂದ ನೇರವಾಗಿ ಕೊಮ್ಮಟ್ಟಕ್ಕೆ ತೆರಳಿ ಸಬ್ ಅರ್ಬನ್ ರೈಲ್ವೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಜಾರಿಗೆ ಚಾಲನೆ ನೀಡಿದರು.

ಇದನ್ನೂ ಓದಿ:ಮಹಾರಾಷ್ಟ್ರ: ಒಂದೇ ಕುಟುಂಬದ 9 ಜನರ ನಿಗೂಢ ಸಾವು, ಆತ್ಮಹತ್ಯೆ ಶಂಕೆ

ABOUT THE AUTHOR

...view details