ಬೆಂಗಳೂರು: ದಕ್ಷಿಣ ಭಾರತದ 6 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ನಾಳೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಕೋವಿಡ್ ಎರಡನೇ ಅಲೆ ನಿಯಂತ್ರಣದ ಸ್ಥಿತಿಗತಿ ಹಾಗೂ ಮೂರನೇ ಅಲೆ ತಡೆಗೆ ಕೈಗೊಳ್ಳುತ್ತಿರುವ ಸಿದ್ಧತೆಗಳ ವಿವರವನ್ನು ಪ್ರಧಾನಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ದಕ್ಷಿಣ ಭಾರತದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ , ಕೇರಳ ಮತ್ತು ಒಡಿಶಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ. ಮೂರನೇ ಅಲೆ ಮುನ್ಸೂಚನೆ ಹಿನ್ನೆಲೆ ಎಲ್ಲ ರಾಜ್ಯಗಳ ಸಿಎಂ ಜೊತೆ ಕೋವಿಡ್ ಸ್ಥಿತಿಗತಿಯ ಬಗ್ಗೆ ಮೋದಿ ಮಾಹಿತಿ ಪಡೆದುಕೊಳ್ಳುತ್ತಿದ್ದು, ಅಗತ್ಯ ಸಲಹೆ ಸೂಚನೆ ನೀಡುತ್ತಿದ್ದಾರೆ. ಹಾಗಾಗಿ ಈಶಾನ್ಯ ರಾಜ್ಯಗಳ ಸಭೆ ನಂತರ ದಕ್ಷಿಣ ರಾಜ್ಯಗಳ ಸಭೆ ನಡೆಸುತ್ತಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣ, ಅನ್ಲಾಕ್ ನಂತರದಲ್ಲಿ ಕೋವಿಡ್ ಪಾಸಿಟಿವಿಟಿ ದರ, ಸದ್ಯ ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದ್ದರೂ, ಮೂರನೇ ಅಲೆ ಏಕಾಏಕಿ ಎದುರಾದರೆ ಪರಿಸ್ಥಿತಿ ಎದುರಿಸಲು ಮಾಡಿಕೊಳ್ಳುತ್ತಿರುವ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಯಡಿಯೂರಪ್ಪ ವಿವರ ನೀಡಲಿದ್ದಾರೆ. ಲಸಿಕಾ ಅಭಿಯಾನಕ್ಕೆ ವೇಗ ನೀಡುವುದೊಂದೇ ಪರಿಹಾರ ಎನ್ನುವ ಕಾರಣಕ್ಕೆ ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ ಸಿಎಂ ಮನವಿ ಮಾಡಲಿದ್ದಾರೆ.
ಅನ್ಲಾಕ್ 4.O ಚರ್ಚೆ?