ಬೆಂಗಳೂರು:ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್ ಇಂದು ಮಧ್ಯಾಹ್ನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದು, ನಾಳೆ ಮಧ್ಯಾಹ್ನ 12 ಗಂಟೆ ಅಂತ್ಯಕ್ರಿಯೆ ನೆರವೇರಲಿದೆ.
ನಾಳೆ 12 ಗಂಟೆಗೆ ನಿಸಾರ್ ಅಹಮದ್ ಅಂತ್ಯಕ್ರಿಯೆ, ಅಂತಿಮ ದರ್ಶನ ವ್ಯವಸ್ಥೆಗೆ ಸರ್ಕಾರ ಚಿಂತನೆ - ಕೆ.ಎಸ್.ನಿಸಾರ್ ಅಹಮದ್ ನಿಧನ
ಇಂದು ನಿಧನರಾದ ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.
Poet Nissar Ahmed
ಸದ್ಯ ಪದ್ಮನಾಭನಗರದ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಇಡಲಾಗಿದ್ದು, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ.