ಬೆಂಗಳೂರು: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿದ ಶ್ರೀರಾಮಪುರ ಪೊಲೀಸರು ಇಬ್ಬರನ್ನು ಬಂಧಿಸಿ, ಮದ್ಯ ವಶಪಡಿಸಿಕೊಂಡಿದ್ದಾರೆ.
ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ - Police arrest two men
ಅಕ್ರಮವಾಗಿ ಎಣ್ಣೆ ಸರಬರಾಜು ಮಾಡುತ್ತಿದ್ದ ಅಡ್ಡೆ ಮೇಲೆ ದಾಳಿ ಮಾಡಿದ ಶ್ರೀರಾಮಪುರ ಪೊಲೀಸರು ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿದ್ದಾರೆ.
ಅಕ್ರಮ ಮದ್ಯ ಮಾರಾಟ ಅಡ್ಡೆ ಮೇಲೆ ಪೊಲೀಸರ ದಾಳಿ
ಶ್ರೀರಾಮಪುರ ನಿವಾಸಿಗಳಾಗದ ಆರ್.ಮಂಜು ಹಾಗೂ ಸತೀಶ್ ಬಂಧಿತ ಆರೋಪಿಗಳು. ಬಂಧಿತರಿಂದ 5.24 ಲಕ್ಷ ರೂ. ಮೌಲ್ಯದ 93.5 ಲೀಟರ್ ಮದ್ಯ ಹಾಗೂ ಟಾಟಾ ಏಸ್ ವಾಹನ ಜಪ್ತಿ ಮಾಡಿಕೊಳ್ಳಲಾಗಿದೆ.
ಅನುಮತಿವಿಲ್ಲದೆ ಮದ್ಯ ಸರಬರಾಜು ಮಾಡುವುದು ಅಕ್ರಮ ಎಂದು ತಿಳಿದಿದ್ದರೂ ಆರೋಪಿಗಳು ವಾಹನ ಮೂಲಕ ಮದ್ಯ ಸಾಗಾಟಕ್ಕೆ ಕೈ ಹಾಕಿದ್ದರು. ಖಚಿತ ಮಾಹಿತಿ ಮೇರೆಗೆ ಶ್ರೀರಾಮಪುರ ಇನ್ಸ್ಪೆಕ್ಟರ್ ಸುನಿಲ್ ವೈ ನಾಯಕ್ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
Last Updated : May 27, 2020, 7:43 PM IST