ಬೆಂಗಳೂರು: ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಉತ್ತರ ವಿಭಾಗದ ಪೊಲೀಸ್ ಠಾಣೆಯ CEN ಪೊಲೀಸರು 14 ಜನ ವಿದ್ಯಾರ್ಥಿಗಳನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ಕೈಗೊಂಡಿದ್ದಾರೆ.
ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 14 ಮಂದಿ ಪೊಲೀಸ್ ವಶಕ್ಕೆ - ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 14 ಜನರನ್ನ ವಶಕ್ಕೆ ಪಡೆದ ಉತ್ತರ ವಿಭಾಗ ಪೊಲೀಸರು
ಎಸ್ಎಸ್ಎಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಶಿಕ್ಷಣ ಇಲಾಖೆ ಪ್ರಭಾರಿ ಉಪ ನಿರ್ದೇಶಕ ಬಸವರಾಜು ನೀಡಿರುವ ದೂರಿನನ್ವಯ 14 ಮಂದಿಯನ್ನು ಉತ್ತರ ವಿಭಾಗ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 14 ಜನರನ್ನ ವಶಕ್ಕೆ ಪಡೆದ ಉತ್ತರ ವಿಭಾಗ ಪೊಲೀಸರು
ಈ ಕುರಿತು ಪ್ರತಿಕ್ರಿಯಿಸಿರುವ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್, ಬಂಗಾರ ಪೇಟೆ, ಕೆಜಿಎಫ್ ಭಾಗದ ಅಕ್ಷಯ ಇಂಟರ್ ನ್ಯಾಷನಲ್ ಸ್ಕೂಲ್, ನವಚೇತನ ಸ್ಕೂಲ್ ಸೇರಿದಂತೆ ಕೋಲಾರ ಹಾಗೂ ಬಂಗಾರಪೇಟೆ ಭಾಗದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದೇವೆ. ಜೆ.ಜೆ.ಆ್ಯ ಕ್ಟ್ನ ಅಡಿಯಲ್ಲಿ ಪ್ರಕರಣ ವಿಚಾರಣೆ ನಡೆಸುತ್ತೇವೆ. ಸದ್ಯ ಹಲೋ ಆ್ಯಪ್ನ ಮೂಲಕ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ ಎಂದರು.
TAGGED:
question paper leak case