ಕರ್ನಾಟಕ

karnataka

ETV Bharat / state

ಗಾಂಜಾ ಸರಬರಾಜು ಆರೋಪ: 25 ಕಾರುಗಳ ಮಾಲೀಕನ ಬಂಧನ - Arrest of accused who was sell marijuana in bangalore

ಟ್ರಾನ್ಸ್ ಪೋರ್ಟ್ ಸಲ್ಯೂಷನ್ ಹೆಸರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ವ್ಯಕ್ತಿ 25 ಕಾರುಗಳನ್ನು ಹೊಂದಿದ್ದು, ಈ ಕಾರ್​ಗಳ ಮೂಲಕವೇ ತನ್ನ ಅಕ್ರಮ ಕೆಲಸವನ್ನು ಮಾಡಿ ಹಣ ಸಂಪಾದನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.

Arrest of accused who was sell marijuana in bangalore
25 ಕಾರುಗಳ ಮಾಲೀಕನ ಬಂಧನ

By

Published : Dec 1, 2020, 3:48 PM IST

ಬೆಂಗಳೂರು: ಟ್ರಾವೆಲ್ಸ್ ಏಜೆನ್ಸಿ ಇಟ್ಟುಕೊಂಡು ಕಾರುಗಳ ಮೂಲಕ ಗಾಂಜಾ ಸರಬರಾಜು ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದ ಟ್ರಾವೆಲ್ಸ್ ಏಜೆನ್ಸಿ ಮಾಲೀಕನನ್ನು ಎಸ್.ಜೆ.ಪಾರ್ಕ್ ಪೊಲೀಸರು ಬಂಧಿಸಿದ್ದಾರೆ.

ಪ್ರದೀಪ್ ಕುಮಾರ್ ಬಂಧಿತ ಆರೋಪಿ. ಈತ ಬೆಂಗಳೂರು ಟ್ರಾನ್ಸ್ ಪೋರ್ಟ್ ಸಲ್ಯೂಷನ್ ಹೆಸರಿನಲ್ಲಿ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ. 25 ಕಾರುಗಳಿಗೆ ಮಾಲೀಕನಾಗಿದ್ದ ಪ್ರದೀಪ್, ಕಳೆದ ಐದು ವರ್ಷಗಳಿಂದ ತಮ್ಮ ಏಜೆನ್ಸಿ ಕಾರಿನಲ್ಲಿಯೇ ಗಾಂಜಾ ಸರಬರಾಜು ಮಾಡುತ್ತಿದ್ದ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

ಓದಿ: ಹೈದರಾಬಾದ್‌ನಿಂದ ಮಂಗಳೂರಿಗೆ ಗಾಂಜಾ ಸಾಗಾಟ : ಇಬ್ಬರ ಬಂಧನ

ಈತ ಕೋಲಾರದ ವಾಸಿ ಸಲೀಂ ಎಂಬಾತನಿಂದ ಖರೀದಿಸಿ ಡ್ರಗ್ಸ್ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ. ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುವಾಗ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ 30 ಲಕ್ಷ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ‌. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಸಲೀಂ ಪರಾರಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details