ಬೆಂಗಳೂರು:ಕೊಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಮತ್ತು ತುಮಕೂರು ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ಗುಂಡನ ಮೇಲೆ ಪೊಲೀಸರಿಂದ ಶೂಟೌಟ್ - ಬೆಂಗಳೂರು ಕ್ರೈಮ್ ಲೆಟೆಸ್ಟ್ ನ್ಯೂಸ್
ತುಮಕೂರು ಮತ್ತು ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಫನ್ ಫರ್ನಾಂಡಿಸ್ ಅಲಿಯಾಸ್ ಗುಂಡನ ಮೇಲೆ ಪೊಲೀಸರು ಶೂಟೌಟ್ ನಡೆಸಿ ಬಂಧಿಸಿದ್ದಾರೆ.
ಫನ್ ಫರ್ನಾಂಡಿಸ್ ಅಲಿಯಾಸ್ ಗುಂಡ ಬಂಧಿತ ಆರೋಪಿ. ಬಾಗಲಗುಂಟೆ ಠಾಣಾ ವ್ಯಾಪ್ತಿಯ ಮಲ್ಲಸಂದ್ರದಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರು, ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈತ ತುಮಕೂರು ಜಯನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಸುಮಾರು14 ಅಪರಾಧ ಪ್ರಕರಣಗಳು ಈತನ ಮೇಲಿವೆ. ಕಳೆದ 6 ತಿಂಗಳಿನಿಂದ ಪೊಲೀಸರಿಗೆ ಬೇಕಾಗಿದ್ದ ಆರೋಪಿಯನ್ನು ಬಂಧಿಸಿ ಇತರೆ ಆರೋಪಿಯ ಸಹಚರರ ಬಂಧನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ಆಪಾದಿತನು ಬೆಂಗಳೂರಿನ ಕೆಲ ಠಾಣಾ ರೌಡಿಶೀಟರ್ಗಳೊಂದಿಗೆ ಸಂಪರ್ಕ ಹೊಂದಿದ್ದ ಎಂದು ನಗರ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.