ಬೆಂಗಳೂರು: ಮಹಿಳೆ ಜೊತೆ ಅನುಚಿತವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಹುಳಿಮಾವು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗಾರ್ಮೆಂಟ್ಸ್ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ... ಆರೋಪಿ ಅಂದರ್ - undefined
ಬೆಂಗಳೂರಿನ ಗಾರ್ಮೆಂಟ್ಸ್ವೊಂದರಲ್ಲಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾ ಮೂಲದ ವ್ಯಕ್ತಿಯನ್ನು ಹುಳಿಮಾವು ಪೊಲೀಸರು ಕಂಬಿ ಹಿಂದೆ ತಳ್ಳಿದ್ದಾರೆ.

ಹರಿಶೇಖರ್(28) ಬಂಧಿತ ಆರೋಪಿ. ಒಡಿಶಾ ಮೂಲದ ಹರಿಶೇಖರ್ ಹುಳಿಮಾವು ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸ್ತಿದ್ದ. ಅಲ್ಲೆ ಗಾರ್ಮೆಂಟ್ಸ್ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆವೋರ್ವಳು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಆರೋಪಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ಜೊತೆಯಾಗೇ ಮನೆಯೊಳಗೆ ನುಗ್ಗಿದ್ದ. ಈ ವೇಳೆ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.
ಆತನ ನಡುವಳಿಕೆಯಿಂದ ಬೆಚ್ಚಿಬಿದ್ದ ಮಹಿಳೆ ಕೂಗಿಕೊಂಡಿದ್ದಾಳೆ. ತಕ್ಷಣ ಸ್ಥಳೀಯರಿಗೆ ವಿಷಯ ತಿಳಿದು ಮಹಿಳೆಯ ಮನೆಗೆ ಬಂದು ಆಕೆಯನ್ನು ಕಾಪಾಡಿದ್ದಾರೆ. ಅಲ್ಲದೆ ಪೊಲೀಸರಿಗೆ ಕರೆ ಮಾಡಿ ಆರೋಪಿಯನ್ನ ಒಪ್ಪಿಸಿದ್ದಾರೆ. ಸದ್ಯ ಈತನ ವಿರುದ್ಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.