ಬೆಂಗಳೂರು :ಸಮಾಜ ಸೇವಕ, ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದುಕೊಂಡು ಮೊಬೈಲ್ ಕಳ್ಳತನ ಮಾಡಿ ಹೊರ ರಾಜ್ಯಗಳಿಗೆ ಮಾರಾಟ ಮಾಡುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸ್ ಅತಿಥಿಯಾಗಿದ್ದಾನೆ.
ಬರೋಬ್ಬರಿ 563 ಮೊಬೈಲ್ ಕಳ್ಳತನ ಮಾಡಿದ್ದ ಖತರ್ನಾಕ್ ಖದೀಮ ಅಂದರ್ - ಬೆಂಗಳೂರು ಪೊಲೀಸ್ ಕಾರ್ಯಚರಣೆ
ಕಳೆದ ಎರಡು ದಿನಗಳ ಹಿಂದೆ ಕೇಂದ್ರ ವಿಭಾಗದ ಪೊಲೀಸರು ಕಾರ್ಯಚರಣೆ ನಡೆಸಿ 10 ಜನ ಅಂತಾರಾಜ್ಯ ಕಳ್ಳರ ಗುಂಪೊಂದನ್ನು ಬಂಧಿಸಿತ್ತು. ಪ್ರಕರಣ ಸಂಬಂಧ ಪ್ರಮುಖ ಆರೋಪಿಗಾಗಿ ಬಲೆ ಬೀಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಸುಮಾರು 563 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತ ಎಂದು ಬಿಂಬಿಸಿಕೊಂಡಿದ್ದ ಆರೀಫ್ ಅಫ್ಜಲ್ ಖಾನ್ ಬಂಧಿತ ಆರೋಪಿ. ಬಂಧಿತನಿಂದ ವಿವಿಧ ಕಂಪನಿಯ ಸುಮಾರು 563 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೆ.ಜೆ ನಗರದ ನಿವಾಸಿಯಾಗಿರುವ ಅಫ್ಜಲ್ ಖಾನ್ ಕಳೆದ ಆರೇಳು ವರ್ಷಗಳಿಂದ ಈ ಮೊಬೈಲ್ ಕಳ್ಳತನ ದಂಧೆ ನಡೆಸುತ್ತಿದ್ದು, ತನ್ನ ಸಹಚರರ ಮೂಲಕ ಕಳ್ಳತನ ಮಾಡಿಸಿ ಕದ್ದದಂತಹ ಮೊಬೈಲ್ಗಳನ್ನು ನೆರೆ ರಾಜ್ಯಗಳಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಪೊಲೀಸ್ ತನಿಖೆಯಿಂದ ಬಯಲಾಗಿದೆ. ಅಷ್ಟೇ ಅಲ್ಲದೆ ಈತನಿಗೆ ಚಾಮರಾಜಪೇಟೆ ಶಾಸಕರ ಜೊತೆ ನಂಟು ಇರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಕಳೆದ ಎರಡು ದಿನಗಳ ಹಿಂದೆ ಕೇಂದ್ರ ವಿಭಾಗದ ಪೊಲೀಸರು ಬಂಧಿತಸಿದ್ದ 10 ಜನ ಅಂತಾರಾಜ್ಯ ಮೊಬೈಲ್ ಕಳ್ಳರ ಜಾಲವನ್ನು ಬೇಧಿಸಿದ್ದರು. ಈ ವೇಳೆ, ಪ್ರಕರಣದ ಪ್ರಮುಖ ಆರೋಪಿಗೆ ಬಲೆ ಬೀಸಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.