ಬೆಂಗಳೂರು: ಸರ್ಕಾರಿ ಶಾಲೆಯ ಆಟದ ಮೈದಾನದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಶ್ಚಿಮ ವಿಭಾಗದ ಬಸವೇಶ್ವರ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮದನ್ ಕುಮಾರ್, ಹೇಮಂತ್ ಕುಮಾರ್, ತೇಜಸ್ ಬಂಧಿತ ಆರೋಪಿಗಳಾಗಿದ್ದಾರೆ.
ಶಾಲಾ ಮೈದಾನದ ಬಳಿ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿಗಳ ಬಂಧನ - Drugs Network
ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಗರದ ಗಂಗಮ್ಮ ತಿಮ್ಮಯ್ಯ ಸರ್ಕಾರಿ ಶಾಲೆ ಎದುರಿನ ಆಟದ ಮೈದಾನದ ಬಳಿ ಮಾದಕ ವಸ್ತು ಮಾರಾಟ ಮಾಡಲು ಬಂದಿರುವ ಕುರಿತು ಬಸವೇಶ್ವನಗರ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆ ದಾಳಿ ನಡೆಸಿ ಮೂವರನ್ನು ಬಂಧಿಸಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಗರದ ಗಂಗಮ್ಮ ತಿಮ್ಮಯ್ಯ ಸರ್ಕಾರಿ ಶಾಲೆ ಎದುರಿನ ಆಟದ ಮೈದಾನದ ಬಳಿ ಮಾದಕ ವಸ್ತು ಮಾರಾಟ ಮಾಡಲು ಬಂದಿರುವ ಕುರಿತು ಬಸವೇಶ್ವನಗರ ಪೊಲೀಸರಿಗೆ ಮಾಹಿತಿ ಲಭ್ಯವಾಗಿತ್ತು.
ಹೀಗಾಗಿ ಪೊಲೀಸರು ದಾಳಿ ಮಾಡಿದಾಗ ಕಾರಿನಲ್ಲಿ ಮಾದಕ ವಸ್ತು ಇಟ್ಟುಕೊಂಡಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಬಂಧಿತ ಆರೋಪಿಗಳಿಂದ 2 ಕೆಜಿ 159 ಗ್ರಾಂ ತೂಕದ ಗಾಂಜಾ, 2 ಮೊಬೈಲ್ ವಶಪಡಿಸಿದ್ದಾರೆ. ಇನ್ನು ಆರೋಪಿಗಳು ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.