ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚಿದೆ. ಹೀಗಾಗಿ ಪೊಲೀಸರೇ ರಸ್ತೆಗಿಳಿಯಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ನಡುವೆ ಪೊಲೀಸ್ ಎಂದು ಹೇಳಿಕೊಂಡು ಸಾರ್ವಜನಿಕರಿಂದ ಮೊಬೈಲ್ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನ ಉತ್ತರ ವಿಭಾಗದ ಸುಬ್ರಹ್ಮಣ್ಯ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಹೆಶ್ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜಿ.ಕೆ ಪ್ರಿಂಟಿಗ್ ಪಾಯಿಂಟ್ ಬಳಿ ವೇದಮೂರ್ತಿ ಎಂಬುವವರು ತಮ್ಮ ಕಾರನ್ನು ನಿಲ್ಲಿಸಿದ್ದರು. ಈ ವೇಳೆ ಆರೋಪಿ ಮಹೇಶ್ತಾ ತಾನು ಪೊಲೀಸ್ ಅಧಿಕಾರಿಯೆಂದು ಪರಿಚಯ ಮಾಡಿಕೊಂಡು ಬಾಡಿಗೆಗೆ ಕಾರು ಬೇಕೆಂದು ಕರೆದೊಯ್ದಿದ್ದಾನೆ. ನಂತರ ಪೊಲೀಸ್ ಎಂದು ಹೆದರಿಸಿ ಮೊಬೈಲ್ ಸುಲಿಗೆ ಮಾಡಿದ್ದಾನೆ.