ಬೆಂಗಳೂರು:ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಆಯ್ಕೆಯಾದ ಬೆನ್ನಲ್ಲೇ ಸಂಭ್ರಮಾಚರಣೆಗೆ ಮುಂದಾದಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬ್ರೇಕ್ ಹಾಕಿದರು.
ಬಿಜೆಪಿ ಕಾರ್ಯಕರ್ತರ ಸಂಭ್ರಮಕ್ಕೆ ಬ್ರೇಕ್ ಹಾಕಿದ ಪೊಲೀಸರು - ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಆಯ್ಕೆ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿ ಗೌತಮ್ ಕುಮಾರ್ ಜೈನ್ ಆಯ್ಕೆಯಾದ ಬೆನ್ನಲ್ಲೇ ಸಂಭ್ರಮಾಚರಣೆಗೆ ಮುಂದಾದ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರು ಬ್ರೇಕ್ ಹಾಕಿದರು.
ಬಿಜೆಪಿ ಕಾರ್ಯಕರ್ತರು
ಬಿಬಿಎಂಪಿ ಆವರಣದ 200 ಮೀಟರ್ವರೆಗೆ 144 ಸೆಕ್ಷನ್ ಇರುವ ಕಾರಣ ಯಾರು ಇಲ್ಲಿ ಗುಂಪು ಸೇರಬಾರದು. ಒಂದು ವೇಳೆ ಗುಂಪು ಸೇರಿ ಸಂಭ್ರಮಕ್ಕೆ ಮುಂದಾದರೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇನ್ನು ಪೊಲೀಸರ ಎಚ್ಚರಿಕೆಗೆ ಬಿಜೆಪಿ ಕಾರ್ಯಕರ್ತರು ಬೇಸರಗೊಂಡು ಅಲ್ಲಿಂದ ಜಾಗ ಖಾಲಿ ಮಾಡಿದರು.