ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿ ಆಕ್ಷೇಪಾರ್ಹವಾಗಿ ಟ್ವೀಟ್ ಮಾಡಿದ್ದ ಆರೋಪದಡಿ ಬಂಧಿತರಾಗಿರುವ ಆಲ್ಟ್ ನ್ಯೂಸ್ ಪತ್ರಕರ್ತ ಮೊಹಮ್ಮದ್ ಜುಬೇರ್ ವಿಚಾರಣೆ ತೀವ್ರಗೊಂಡಿದೆ. ಈ ನಿಟ್ಟಿನಲ್ಲಿ ಅವರನ್ನು ದೆಹಲಿ ಪೊಲೀಸರು ನಗರಕ್ಕೆ ಕರೆತಂದು ಅವರ ನಿವಾಸದಲ್ಲಿ ಮಹಜರು ನಡೆಸಿದ್ದಾರೆ.
ಪತ್ರಕರ್ತ ಮೊಹಮ್ಮದ್ ಜುಬೇರ್ ನಿವಾಸವಿರುವ ಕಾವಲ್ ಬೈರಸಂದ್ರಕ್ಕೆ ಕರೆತಂದ ದೆಹಲಿ ಪೊಲೀಸರು ಮಹಜರಿಗೆ ಒಳಪಡಿಸಿದರು. ಇದಕ್ಕೂ ಮುನ್ನ ಡಿ.ಜೆ. ಹಳ್ಳಿ ಪೊಲೀಸ್ ಠಾಣೆಗೆ ಕರೆತಂದಿದ್ದರು. ಬಳಿಕ ಮನೆಗೆ ಕರೆದೊಯ್ದು ಲಾಪ್ ಟ್ಯಾಪ್ ಸೇರಿದಂತೆ ಇನ್ನಿತರ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ಮನೆ ಸುತ್ತಮುತ್ತಲು ಬಿಗಿ ಪೊಲೀಸ್ ಬಂದೋಬಸ್ತ ಒದಗಿಸಲಾಗಿದೆ.