ಬೆಂಗಳೂರು:ಹಿಜಾಬ್ ವಿವಾದ ರಾಜ್ಯ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಸಂಬಂಧ ಹೈಕೋರ್ಟ್ನಲ್ಲಿ ಅರ್ಜಿ ವಿಚಾರಣೆ ನಡೆಸುತ್ತಿದೆ. ಈ ಮಧ್ಯೆ ರಾಜ್ಯ ಆಂತರಿಕ ಭದ್ರತಾ ಘಟಕ (ಐಎಸ್ಡಿ) ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕುವಂತೆ ಸೂಚಿಸಿದ ಬೆನ್ನಲೇ ವಿದ್ಯಾರ್ಥಿಗಳಿಂದ ಆಕ್ಷೇಪ ಕೇಳಿ ಬಂದಿದೆ.
ರಾಜ್ಯದಲ್ಲಿ ಹಿಜಬ್- ಕೇಸರಿ ವಿವಾದ ಬಿಸಿಯಾಗಿರುವಾಗಲೇ ರಾಜ್ಯದ ಶೈಕ್ಷಣಿಕ ಸಂಸ್ಥೆಗಳ ವ್ಯಾಸಂಗ ಮಾಡುತ್ತಿರುವ ಕಾಶ್ಮೀರಿ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದಕ್ಕೆ ಜಮ್ಮು ಮತ್ತು ಕಾಶ್ಮೀರಿ ಸ್ಟೂಡೆಂಟ್ ಅಸೋಸಿಯೇಷನ್ ಅಸಮಾಧಾನ ವ್ಯಕ್ತಪಡಿಸಿದೆ.