ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ನಾಳೆ ಕರೆ ನೀಡಲಾಗಿರುವ ಭಾರತ್ ಬಂದ್ ಸಂಬಂಧ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ನಗರರ ಎಲ್ಲಾ ಡಿಸಿಪಿಗಳೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ.
ಕಳೆದ 12 ದಿನಗಳಿಂದ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಮಣಿಯದ ಹಿನ್ನೆಲೆಯಲ್ಲಿ ನಾಳೆ ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಬಂದ್ ಬಿಸಿ ತಟ್ಟುವ ಸಾಧ್ಯತೆಯಿದೆ. ಬೀದಿಬದಿ ವ್ಯಾಪಾರಿಗಳು, ಎಪಿಎಂಸಿ ಕಾರ್ಮಿಕರ ಸಂಘಟನೆ ಹಾಗೂ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ. ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪೊಲೀಸ್ ಕಮಿಷನರ್ ಕಮಲ್ ಪಂತ್ ನಗರದ ಎಲ್ಲಾ ವಿಭಾಗದ ಡಿಸಿಪಿಗಳೊಂದಿಗೆ ಸಭೆ ನಡೆಸುತ್ತಿದ್ದಾರೆ.