ಕರ್ನಾಟಕ

karnataka

ETV Bharat / state

ಸಂಚಾರ ಸಮಸ್ಯೆ: ಜನಸ್ಪಂದನ ಸಭೆ ನಡೆಸಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ - ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್

ಸಿಎಂ ಸೂಚನೆಯಂತೆ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್ ನೇತೃತ್ವದಲ್ಲಿ ಶನಿವಾರ ಜನಸ್ಪಂದನ ಕಾರ್ಯಕ್ರಮ ನಡೆಸಲಾಯಿತು. ಸಂಚಾರ ಸಮಸ್ಯೆಗಳ ಕುರಿತಂತೆ ಸಾರ್ವಜನಿಕರು, ಸಂಘ, ಸಂಸ್ಥೆಗಳು ಹಲವಾರು ಅಹವಾಲುಗಳನ್ನು ಸಲ್ಲಿಸಿದರು.

ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್

By

Published : Aug 24, 2019, 8:03 PM IST

ಬೆಂಗಳೂರು: ನಗರದಲ್ಲಿನ ಅವೈಜ್ಞಾನಿಕ ರಸ್ತೆ ಉಬ್ಬು, ಅಡ್ಡಾದಿಡ್ಡಿ ಬೈಕ್​ ನಿಲುಗಡೆ, ಟ್ರಾಫಿಕ್​ ಪಾರ್ಕ್ ನಿರ್ಮಾಣ ಹಾಗೂ ಆಂಬ್ಯುಲೆನ್ಸ್​ಗೆ ಜಿಪಿಎಸ್​ ಅಳವಡಿಸುವಂತೆ ಸಾರ್ವಜನಕರು ಆಗ್ರಹಿಸಿದರು.
ಸಂಚಾರ ಸಮಸ್ಯೆ ಅರಿಯಲು ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ, ಸಂಘ, ಸಂಸ್ಥೆಗಳು ಪಾಲ್ಗೊಂಡಿದ್ದವು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನೇತೃತ್ವದಲ್ಲಿ ಜನಸ್ಪಂದನ ಸಭೆ ಹಮ್ಮಿಕೊಳ್ಳಲಾಗಿತ್ತು.

ಬಹುತೇಕ ನಗರ ಸಿಗ್ನಲ್​​ಗಳಲ್ಲಿ ಟೈಮರ್ ಇಲ್ಲ. ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ಕೂಡಲೇ ಅವುಗಳನ್ನು ಅಳವಡಿಸುವಂತೆ ಮನವಿ ಮಾಡಿದರು.

ನಗರ ಪೊಲೀಸ್​ ಆಯುಕ್ತ ಭಾಸ್ಕರ್​ ರಾವ್

ಸಿಎಂ ಸೂಚನೆ ಮೇರೆಗೆ ಜನಸ್ಪಂದನ ಕಾರ್ಯಕ್ರಮ ನಡೆಸಿ ಜನರ ಸಮಸ್ಯೆಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.‌ ಸಭೆಯಲ್ಲಿ ನಾಗರಿಕರು ವಿವಿಧ ಸಮಸ್ಯೆ ಹಾಗೂ ಸಲಹೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಮಸ್ಯೆಗಳ ಬಗ್ಗೆ ಪರಿಹಾರಕ್ಕಾಗಿ ಅಲ್ಪಕಾಲಿಕ ಹಾಗೂ ದೀರ್ಘಕಾಲಿಕ ಸಮಸ್ಯೆಗಳ ಬಗ್ಗೆ ಚರ್ಚೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ.

ಬಿಬಿಎಂಪಿ, ಬಿಡಿಎ, ಬಿಎಂಟಿಸಿ, ಬೆಸ್ಕಾಂ ಹಾಗೂ ಬಿಎಂಆರ್ ಸಿಎಲ್ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತರಿಸಿದರು.

ABOUT THE AUTHOR

...view details