ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಲಾಡ್ಜ್‌ನಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಗನಾಥ್ ಕುಮಾರ್.ಆರ್ ಆತ್ಮಹತ್ಯೆಗೆ ಶರಣಾದವರು.
ಕೌಟುಂಬಿಕ ಕಲಹ: ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್ - ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಕಾನ್ಸ್ಟೇಬಲ್, ಒಒಡಿ ಮೇರೆಗೆ ಬೆಂಗಳೂರಿನ ಐಜಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಲಾಡ್ಜ್‌ನಲ್ಲಿ ಯಾರೂ ಇಲ್ಲದಿರುವಾಗ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆ.
ಉಪ್ಪಾರಪೇಟೆ ಸನ್ಮಾನ್ ಲಾಡ್ಜ್‌ನಲ್ಲಿ ನಿನ್ನೆ ರಾತ್ರಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿದು ಉಪ್ಪಾರಪೇಟೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ, ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಿದ್ದಾರೆ.
ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸುತ್ತಿದ್ದ ಕಾನ್ಸ್ಟೇಬಲ್, ಒಒಡಿ ಮೇರೆಗೆ ಬೆಂಗಳೂರಿನ ಐಜಿ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೌಟುಂಬಿಕ ಕಲಹಕ್ಕೆ ಬೇಸತ್ತು ಲಾಡ್ಜ್‌ನಲ್ಲಿ ಯಾರೂ ಇಲ್ಲದಿರುವಾಗ ನೇಣಿಗೆ ಕೊರಳೊಡ್ಡಿದ್ದಾರೆ. ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
TAGGED:
Police committed to suicide