ಬೆಂಗಳೂರು: 2022ನೇ ಸಾಲಿನ ನೇಮಕಾತಿ ಕುರಿತಂತೆ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿದೆ. ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31, 2022ರೊಳಗೆ ಸಲ್ಲಿಸಬಹುದು. ಇದೇ ಮೊದಲ ಬಾರಿಗೆ ಪುರುಷ ತೃತೀಯಲಿಂಗಿ ಪುರುಷರಿಗೆ ಪೊಲೀಸ್ ನೇಮಕಾತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ತೃತೀಯ ಲಿಂಗಿ ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3,484 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತಿದೆ.
ತೃತೀಯ ಲಿಂಗಿಗಳಿಗೆ ಮಿಸಲಾತಿ: ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ 371J ಮೀಸಲಾತಿಯಂತ ಒಟ್ಟು 420 ಹುದ್ದೆಗಳನ್ನ ಮೀಸಲಿರಿಸಲಾಗಿದ್ದು, ಇದರಲ್ಲಿ 11 ಪುರುಷ ತೃತೀಯ ಲಿಂಗಿಗಳಿಗೆ ಮೀಸಲು ನೀಡಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿ ಒಟ್ಟು 3,064 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 68 ಹುದ್ದೆಗಳು ತೃತೀಯ ಲಿಂಗಿ ಪುರುಷರಿಗೆ ಮೀಸಲಾತಿ ನೀಡಲಾಗಿದೆ.
3,484 ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಬಾರಿಗೆ ತೃತೀಯ ಲಿಂಗಿಗಳಿಗೆ ಮೀಸಲಾತಿ ನೀಡಲಾಗಿದೆ. 79 ಹುದ್ದೆಗಳುನ್ನು ತೃತೀಯ ಲಿಂಗಿಗಳಿಗೆ ಮೀಸಲಿರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದರು.
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR)- ಕರ್ನಾಟಕ: 3,064
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR) -ಕಲ್ಯಾಣ ಕರ್ನಾಟಕ: 420