ಬೆಂಗಳೂರು:ಸಿಟಿ ಮಾರ್ಕೆಟ್ ಠಾಣಾ ಪೊಲೀಸ್ ಕಾನ್ಸ್ಟೆಬಲ್ಗೆ ಕೊರೊನಾ ಸೋಂಕು ದೃಢವಾಗಿದೆ.
ಸಿಟಿ ಮಾರ್ಕೆಟ್ ಠಾಣಾ ಪೊಲೀಸ್ ಕಾನ್ಸ್ಟೆಬಲ್ಗೆ ಸೋಂಕು; 8 ಮಂದಿ ಸಿಬ್ಬಂದಿಗೆ ಕ್ವಾರಂಟೈನ್ - ಪೊಲೀಸ್ ಕಾನ್ಸ್ಟೆಬಲ್ಗೆ ಕೊರೊನಾ ಸೋಂಕು ಸುದ್ದಿ
ಬೆಂಗಳೂರಿನ ಸಿಟಿ ಮಾರ್ಕೆಟ್ ಠಾಣಾ ಪೊಲೀಸ್ ಕಾನ್ಸ್ಟೆಬಲ್ಗೆ ಕೊರೊನಾ ಸೋಂಕು ತಗುಲಿದ್ದು, ಠಾಣೆಯ ಕೆಲಸಗಳು ಸ್ವಲ್ಪಮಟ್ಟಿಗೆ ಸ್ಥಗಿತಗೊಂಡಿವೆ. ಜೊತೆಗೆ ಸೋಂಕಿತ ಕಾನ್ಸ್‌ಟೆಬಲ್ ಸಂಪರ್ಕಕ್ಕೆ ಬಂದ 8 ಜನ ಠಾಣಾ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಸೋಂಕಿತ ಪೇದೆ ಇತ್ತೀಚೆಗಷ್ಟೇ ತರಬೇತಿ ಮುಗಿಸಿ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಕರ್ತವ್ಯ ನಿರ್ವಹಣೆಯ ವೇಳೆ ಇವರಲ್ಲಿ ರೋಗದ ಲಕ್ಷಣಗಳು ಕಾಣಿಸಿರಲಿಲ್ಲ. ಆದರೆ ಸಾಮಾನ್ಯ ಸ್ವಾಬ್ ಟೆಸ್ಟ್ ಮಾಡಿದಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಪೊಲೀಸ್ ಕಾನ್ಸ್‌ಟೆಬಲ್ ಇತ್ತೀಚೆಗೆ ಟಿಪ್ಪು ನಗರದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಅಲ್ಲಿಂದ ಸೋಂಕು ತಗುಲಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸದ್ಯ ಸಿಟಿ ಮಾರ್ಕೆಟ್ ಠಾಣೆಯನ್ನು ಸ್ಯಾನಿಟೈಸ್ ಮಾಡಿದ್ದು, ತಾತ್ಕಾಲಿಕವಾಗಿ ಕೆಲಸ ಸ್ಥಗಿತಗೊಳಿಸಿ ಸೋಂಕಿತ ಹಾಗೂ ಅವರ ಸಂಪರ್ಕದಲ್ಲಿದ್ದ 8 ಜನ ಠಾಣಾ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.