ಬೆಂಗಳೂರು: ನಗರದಲ್ಲಿ ಮತ್ತೊಬ್ಬ ಕೊರೊನಾ ವಾರಿಯರ್ ಕೋವಿಡ್ಗೆೆ ಬಲಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಸಿಟಿ ಆರ್ಮ್ ರಿಸರ್ವ್ ಸೌತ್ನಲ್ಲಿ ಎಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಈ ಹಿಂದೆ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಅಷ್ಟೇ ಅಲ್ಲದೆ, ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲಿದ ಕಾರಣ ಅವರನ್ನು ಕೋವಿಡ್ ಕೇರ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇನ್ನೊಂದೆಡೆ ಇವರು ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಸಿಟಿ ಆರ್ಮ್ ರಿಸರ್ವ್(CAR SOUTH) ಕಚೇರಿಯನ್ನು ಸೀಲ್ಡೌನ್ ಮಾಡಿ ಸೋಂಕಿತರ ಸಂಪರ್ಕದಲ್ಲಿದ್ದ ಸಿಬ್ಬಂದಿ ಹಾಗೂ ಕುಟುಂಬಸ್ಥರನ್ನ ಕ್ವಾರಂಟೈನ್ ಮಾಡಲಾಗಿದೆ. ಇದುವರೆಗೆ ನಗರದಲ್ಲಿ ಒಟ್ಟು 9 ಕೊರೊನಾ ವಾರಿಯರ್ಸ್ ಬಲಿಯಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರು ಮತ್ತೆ ಸೋಂಕಿಗೆ ತುತ್ತಾಗಿದ್ದಾರೆ. ಸದ್ಯ 916 ಮಂದಿ ಪೊಲೀಸರಿಗೆ ಕೊರೊನಾ ತಗುಲಿದ್ದು, ಅದರಲ್ಲಿ 615 ಮಂದಿ ಗುಣಮುಖರಾಗಿ, ಸೋಂಕಿತರ ಸಂಪರ್ಕದಲ್ಲಿರುವ 807 ಮಂದಿ ಕ್ವಾರಂಟೈನ್ನಲ್ಲಿ ಇದ್ದಾರೆ.