ಬೆಂಗಳೂರು:ಎಪಿಎಂಸಿ ಕಾಯ್ದೆ ತಿದ್ದುಪಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆಜೆಸ್ಟಿಕ್ಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ: ವಶಕ್ಕೆ ಪಡೆದ ಪೊಲೀಸರು - ಮೆಜೆಸ್ಟಿಕ್ಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ
ರೈತರು ಇಂದು ಕರ್ನಾಟಕ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಮುತ್ತಿಗೆ ಹಾಕಿದ ಕರವೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆಜೆಸ್ಟಿಕ್ಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ
ಬಂದ್ಗೆ ಹಲವು ಸಂಘ ಸಂಸ್ಥೆಗಳು ಬೆಂಬಲ ನೀಡಿದ್ದು, ಮುಂಜಾನೆಯೇ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಘೋಷಣೆಗಳನ್ನು ಕೂಗುತ್ತಾ, ಬಸ್ಗಳನ್ನು ಓಡಿಸಿದಂತೆ ಮನವಿ ಮಾಡಿದ್ದಾರೆ. ಮೆಜೆಸ್ಟಿಕ್ನ ನಾನಾ ರಸ್ತೆಗಳಲ್ಲಿ ಮಲಗಿ ಪ್ರತಿಭಟನೆ ಮಾಡಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.