ಕರ್ನಾಟಕ

karnataka

ETV Bharat / state

ಪ್ರತಿಭಟನೆ ವೇಳೆ ಪೊಲೀಸರ ಕರ್ತವ್ಯ ಶ್ಲಾಘನೀಯ: ಗೃಹ ಸಚಿವ ಬಸವರಾಜ್​​​ ಬೊಮ್ಮಾಯಿ - ಮಾಜಿ ಸಚಿವ ಡಿ.ಕೆ. ಶಿವಕುಮಾರ್

ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಕ್ಕೆ ಧನ್ಯವಾದ ಹೇಳಿದ್ದಾರೆ.

ಗೃಹಸಚಿವ ಬಸವರಾಜ್​ ಬೊಮ್ಮಾಯಿ

By

Published : Sep 11, 2019, 6:55 PM IST

ಬೆಂಗಳೂರು:ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಹಿನ್ನೆಲೆ‌ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ ವೇಳೆ ನಮ್ಮ ಪೊಲೀಸರು ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿದ್ದಾರೆ. ಅವರಿಗೆ ನನ್ನ ಧನ್ಯವಾದಗಳು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ದೆಹಲಿಗೆ ಹೊರಡಲು ಕೆಂಪೇಗೌಡ ಅಂತಾರಾಷ್ಟ್ರಿಯಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇವತ್ತಿನ ಪ್ರತಿಭಟನೆಯಲ್ಲಿ ನಮ್ಮ ಪೊಲೀಸರ ಕರ್ತವ್ಯ ಶ್ಲಾಘನೀಯ. ಪೊಲೀಸ್ ಡಿಜಿಯಿಂದ ಪೇದೆವರೆಗೂ ತುಂಬಾ ದಕ್ಷತೆಯಿಂದ ಕೆಲಸ ಮಾಡಿದ್ದಾರೆ.

ಪೊಲೀಸರ ಕರ್ತವ್ಯ ಶ್ಲಾಘನೀಯ: ಬಸವರಾಜ್​ ಬೊಮ್ಮಾಯಿ

ಸಾರ್ವಜನಿಕರ ಆಸ್ತಿಪಾಸ್ತಿಗೆ ಹಾನಿಯಾಗದಂತೆ ಕೆಲಸ ಮಾಡಿದ್ದಾರೆ. ಪ್ರತಿಭಟನೆ ಶಾಂತಿಯುತವಾಗಿ ನಡೆಯುವಂತೆ ಎಚ್ಚರ ವಹಿಸಿದ ನಮ್ಮ ಎಲ್ಲ ಸಿಬ್ಬಂದಿಗೂ ಧನ್ಯವಾದಗಳು ಎಂದಿದ್ದಾರೆ. ಬಳಿಕ 5.50ಕ್ಕೆ ಇಂಡಿಗೋ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ABOUT THE AUTHOR

...view details