ಬೆಂಗಳೂರು:ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ. ಈ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳಡಿ ಭಾಗಿಯಾಗಿದ್ದ ಪುಡಿ ರೌಡಿವೋರ್ವನ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.
ಡಿ.ಜೆ.ಹಳ್ಳಿ ಠಾಣೆಯ ಸಬ್ ಇನ್ಸ್ಪೆಕ್ಟರ್ ನಾಗದೇವ್, ಆರೋಪಿ ಪ್ರೇಮ್ ಕುಮಾರ್ ಎಂಬಾತನ ಬಗ್ಗೆ ಖಚಿತ ಮಾಹಿತಿ ಪಡೆದು ಡಿ.ಜೆ. ಹಳ್ಳಿಯ ಎಲ್.ಆರ್. ಬಂಡೆಯ ಬಳಿ ಆತನನ್ನು ಸೆರೆ ಹಿಡಿಯಲು ತೆರಳಿದ್ದಾರೆ. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದ ಎನ್ನಲಾಗ್ತಿದೆ. ಸಬ್ ಇನ್ಸ್ಪೆಕ್ಟರ್ ಶರಣಾಗುವಂತೆ ಸೂಚಿಸಿದ್ದರೂ ಸಹ ಒಪ್ಪದೇ ಓಡಿ ಹೋಗಲು ಯತ್ನಿಸಿದಾಗ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.