ಆನೇಕಲ್: ಡೀಸೆಲ್ ಕಳ್ಳನ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಆನೇಕಲ್ ತಾಲೂಕಿನ ಜಿಗಣಿ ಎಂಬಲ್ಲಿ ನಡೆದಿದೆ. ಶ್ರೀನಿವಾಸ್ ಅಲಿಯಾಸ್ ರಾಜು ಕಾಲಿಗೆ ಗುಂಡೇಟು ಬಿದ್ದಿದೆ.
ಬೆಂಗಳೂರಿನ ಜಿಗಣಿ ಠಾಣೆ ಇನ್ಸ್‌ಪೆಕ್ಟರ್ ಸುದರ್ಶನ್ ಅವರು ಜಿಗಣಿಯ ಡಿಎಲ್‌ಎಫ್ ಬಳಿ ಫೈರಿಂಗ್ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್‌ಪಿ ಮಲ್ಲೇಶ್, ಎಎಸ್ಪಿ ಲಕ್ಷ್ಮಿ ಗಣೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರಾತ್ರಿ ವೇಳೆ ರಸ್ತೆ ಬದಿ ನಿಲ್ಲಿಸಿಕೊಂಡು ಗಾಢ ನಿದ್ರೆಯಲ್ಲಿರುವವರ ಲಾರಿಗಳಲ್ಲಿ ಕಳ್ಳರು ಡೀಸೆಲ್ ಕದಿಯುತ್ತಿದ್ದರು. ಈ ಖತರ್ನಾಕ್ ಗ್ಯಾಂಗ್ ಟಾಟಾ ಸುಮೋದಲ್ಲಿ ಬಂದು ಡೀಸೆಲ್ ಕಳ್ಳತನ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.