ಕರ್ನಾಟಕ

karnataka

ETV Bharat / state

ಆನೇಕಲ್​ ಒಂಟಿ ಮಹಿಳೆಯ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು - Anekal latest News

ದರೋಡೆಗೆ ಬಂದ ಇಬ್ಬರು ಕಿಡಿಗೇಡಿಗಳು ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿ, ಮಾಂಗಲ್ಯ ಸರ ಸೇರಿದಂತೆ ಅನೇಕ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು. ಈ ಕೇಸ್​ನ ಕಾರ್ಯಾಚರಣೆ ವೇಳೆ ಪೊಲೀಸರು ಖದೀಮರ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಒಂಟಿ ಮಹಿಳೆಯ ಕೊಲೆ ಆರೋಪಿಗಳ ಬಂಧನ
ಒಂಟಿ ಮಹಿಳೆಯ ಕೊಲೆ ಆರೋಪಿಗಳ ಬಂಧನ

By

Published : Sep 22, 2020, 8:27 AM IST

ಆನೇಕಲ್: ಒಂಟಿ ಮಹಿಳೆ ಮನೆಗೆ ನುಗ್ಗಿ ಆಕೆಯನ್ನು ಕೊಲೆಗೈದು, ಬಳಿಕ ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಆದ್ದರಿಂದ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ.

ಸೈಕೋ ಅಲಿಯಾಸ್ ವೇಲು, ಬಾಲ ಅಲಿಯಾಸ್ ಬಾಲಕೃಷ್ಣ ಕೊಲೆ ಆರೋಪಿಗಳು. ಆನೇಕಲ್ ತಾಲೂಕಿನ ಸಿಂಗೇನ ಅಗ್ರಹಾರ ಬಳಿಯ ಮನೆಯಲ್ಲಿ ಶ್ವೇತ ಎಂಬಾಕೆ ವಾಸವಾಗಿದ್ದಳು. ಆದರೆ ವಾರದ ಹಿಂದೆ ದರೋಡೆಗೆ ಬಂದ ಈ ಇಬ್ಬರು ಕಿಡಿಗೇಡಿಗಳು ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿ ಮಾಂಗಲ್ಯ ಸರ ಸೇರಿದಂತೆ ಇತರೆ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ಆರೋಪಿಗಳನ್ನು ಸೆರೆ ಹಿಡಿಯಲು ಹೆಬ್ಬಗೋಡಿ ಇನ್ಸ್​ಪೆಕ್ಷರ್​ ಗೌತಮ್ ಮತ್ತು ಬನ್ನೇರುಘಟ್ಟ ಎಸ್ಐ ಗೋವಿಂದ್​ ಕಾರ್ಯಾಚರಣೆಗೆ ಇಳಿದಿದ್ದರು. ಮುತ್ಯಾಲಮಡುವಿನ ಬಳಿ ಆರೋಪಿಗಳು ಇರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು. ಆದರೆ ಈ ವೇಳೆ ಕತ್ತಿಯಿಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿದ್ದ ಖದೀಮರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.

ABOUT THE AUTHOR

...view details