ನೆಲಮಂಗಲ: ಕುಖ್ಯಾತ ದರೋಡೆಕೋರನ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಕುಖ್ಯಾತ ದರೋಡೆಕೋರ ಯೋಗಾನಂದ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ದರೋಡೆಕೋರ ಯೋಗಾನಂದ ಮೇಲೆ ನೆಲಮಂಗಲ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಶಶಿಧರ್ ಗುಂಡು ಹಾರಿಸಿದ್ದಾರೆ. ಪ್ರಕರಣವೊಂದರಲ್ಲಿ ಯೋಗಾನಂದ ಬಂಧವಾಗಿತ್ತು. ಆರೋಪಿಯನ್ನು ಕೃತ್ಯದ ಸ್ಥಳಕ್ಕೆ ಪೊಲೀಸರು ಕರೆದೊಯ್ಯುತ್ತಿದ್ದರು. ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.