ಕರ್ನಾಟಕ

karnataka

ETV Bharat / state

ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು - ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ

ಬೆಂಗಳೂರಿನ ಸಂಜಯನಗರದ ಗೆದ್ದಲಹಳ್ಳಿಯಲ್ಲಿ ಐದು ವರ್ಷದ ಮಗುವಿನ ಮೇಲೆ ಪಶ್ಚಿಮ ಬಂಗಾಳ ಮೂಲದ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿತ್ತು. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.

Police gave accused judicial custody at Bangalore
ಆರೋಪಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು

By

Published : Sep 20, 2021, 11:18 PM IST

ಬೆಂಗಳೂರು:ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಜೆಸಿ ನಗರ ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಸಲಾಗಿತ್ತು. ಭಾನುವಾರ ಪಶ್ಚಿಮ ಬಂಗಾಳ ಮೂಲದ ಸೌರಬ್ (25) ಎಂಬ ಆರೋಪಿಯನ್ನು ಬಂಧಿಸಲಾಗಿತ್ತು. ಇಂದು ಆತನನ್ನು ಕೋರ್ಟ್‌ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಆರೋಪಿ ಸೌರಬ್ ನಗರದ ಐಶಾರಾಮಿ ಹೋಟೆಲ್‌ವೊಂದರಲ್ಲಿ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದನು. ಒಂದು ತಿಂಗಳ ಹಿಂದೆ ಕೆಲಸ ಬಿಟ್ಟು ಸಂಜಯ್‌ ನಗರದಲ್ಲಿರುವ ಸ್ನೇಹಿತರ ಮನೆಯಲ್ಲಿ ವಾಸಿಸುತ್ತಿದ್ದನು. ಆಗ ಪಕ್ಕದ ಮನೆಯಲ್ಲಿದ್ದ 5 ವರ್ಷದ ಬಾಲಕಿಯನ್ನು ಪರಿಚಯಿಸಿಕೊಂಡು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದನು.

ಬಾಲಕಿ ಮನೆಗೆ ಬಂದಾಗ ನೆರೆ ಮನೆಯವರು ಬಾಲಕಿಯನ್ನು ಎಲ್ಲಿ ಹೋಗಿದ್ದೆ ಎಂದು ಪ್ರಶ್ನಿಸಿದಾಗ ನಡೆದ ಸಂಗತಿಯನ್ನು ವಿವರಿಸಿದ್ದಳು. ಆಗ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಪಿ ಲೈಂಗಿಕ ದೌರ್ಜನ್ಯ ಎಸಗಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಅರೆಸ್ಟ್: ಠಾಣೆ ಮುಂಭಾಗ ಕಾನೂನು ಕ್ರಮಕ್ಕೆ ಮುಂದಾದ ಸಾರ್ವಜನಿಕರು

ABOUT THE AUTHOR

...view details