ಬೆಂಗಳೂರು: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಮೇಲೆ ನಗರ ಪೊಲೀಸರು ಕಣ್ಣಿಟ್ಟಿದ್ದು, ಸದ್ಯ 59 ಬಾಂಗ್ಲಾ ವಲಸಿಗರನ್ನು ಬೆಂಗಳೂರಿನಿಂದ ಪಶ್ಚಿಮ ಬಂಗಾಳಕ್ಕೆ ರವಾನೆ ಮಾಡಿದ್ದಾರೆ.
ಬಾಂಗ್ಲಾ ವಲಸಿಗರಿಗೆ ಪೊಲೀಸರ ಶಾಕ್: 59 ಮಂದಿ ಪಶ್ಚಿಮ ಬಂಗಾಳಕ್ಕೆ ರವಾನೆ - ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆ
ಅಕ್ರಮವಾಗಿ ಸಿಲಿಕಾನ್ ಸಿಟಿಯಲ್ಲಿ ನೆಲೆಸಿರುವ ಬಾಂಗ್ಲಾ ವಲಸಿಗರ ಮೇಲೆ ನಗರ ಪೊಲೀಸರು ಕಣ್ಣಿಟ್ಟಿದ್ದಾರೆ. ಈಗಾಗಲೇ 59 ಬಾಂಗ್ಲಾ ವಲಸಿಗರನ್ನು ಬೆಂಗಳೂರಿನಿಂದ ಪಶ್ಚಿಮ ಬಂಗಾಳಕ್ಕೆ ಕಳುಹಿಸಿದ್ದಾರೆ.
ಅಕ್ರಮ ವಲಸಿಗರನ್ನ ದೇಶದಿಂದ ಹೊರಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಎನ್ಆರ್ಸಿ ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹಸಚಿವ ಹೇಳಿಕೆ ಕೊಟ್ಟಿದ್ದರು. ಹೀಗಾಗಿ ರಾಷ್ಟ್ರೀಯ ಪೌರತ್ವ ನೋಂದಣಿ ಕಾಯ್ದೆಯನ್ನ ರಾಜ್ಯದಲ್ಲಿ ಕೂಡ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ನಗರ ಪೊಲೀಸರು ಈಗಾಗಲೇ ಕಾರ್ಯಾಚರಣೆಗೆ ಇಳಿದಿದ್ದಾರೆ. ಸದ್ಯ 59 ಜನರನ್ನು ಗಡಿಪಾರು ಮಾಡಿ 28 ಜನ ಪೊಲೀಸ್ ಸಿಬ್ಬಂದಿಯನ್ನ ಪಶ್ಚಿಮ ಬಂಗಾಳಕ್ಕೆ ರವಾನೆ ಮಾಡಿದ್ದಾರೆ.
ನಗರದ ರಾಮಮೂರ್ತಿ ನಗರ, ಬೆಳ್ಳಂದೂರು, ಮಾರತ್ ಹಳ್ಳಿ, ಇಂದಿರಾನಗರ, ಹೀಗೆ ಹಲವೆಡೆ ನಗರದಲ್ಲಿ ಬಾಂಗ್ಲಾ ನಿವಾಸಿಗಳು ವಾಸವಿದ್ದಾರೆ. ಸದ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, 59 ಜನರನ್ನು ಬಂಧಿಸಿದ್ದಾರೆ. ಇನ್ನು ಕೆಲವರು ನಗರದಲ್ಲಿ ವಾಸವಿರುವ ಕಾರಣ ಮಫ್ತಿಯಲ್ಲಿರುವ ಸಿಸಿಬಿ ಹಾಗೂ ಪೊಲೀಸರು ಕಾರ್ಯಾಚರಣೆ ಮಾಡ್ತಿದ್ದಾರೆ.