ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ನಗರ ಪೂರ್ವ ವಿಭಾಗದ ಪೊಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.
ಉಪ ಚುನಾವಣೆ: ರೌಡಿ ಪರೇಡ್, ರೂಟ್ ಮಾರ್ಚ್ ನಡೆಸಿದ ಪೂರ್ವ ವಿಭಾಗ ಪೊಲೀಸರು - ಡಿಸಿಪಿ ಡಾ. ಶರಣಪ್ಪ ಸುದ್ದಿ
ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಸಲುವಾಗಿ ನಗರ ಪೂರ್ವ ವಿಭಾಗದ ಪೊಲೀಸರು ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.
ಚುನಾವಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಇಲ್ಲಿನ ಪೊಲೀಸರು ಇಂದು ರೌಡಿ ಪರೇಡ್ ನಡೆಸಿದರು. ಕೆ.ಆರ್ ಪುರ, ಕೆ.ಜಿ ಹಳ್ಳಿ, ಡಿ.ಜಿ ಹಳ್ಳಿ, ಶಿವಾಜಿನಗರ ಹಾಗೂ ಬಾಣಸವಾಡಿ ಭಾಗದದಲ್ಲಿ ಕ್ರಿಯಾಶೀಲರಾಗಿರುವ ಸುಮಾರು 100ಕ್ಕೂ ಹೆಚ್ಚು ರೌಡಿಗಳಿಗೆ ಡಿಸಿಪಿ ಡಾ. ಶರಣಪ್ಪ ಬಿಸಿ ಮುಟ್ಟಿಸಿದರು. ಅಪರಾಧ ಚಟುವಟಿಕೆಗಳಲ್ಲಿ ಅಥವಾ ಹಿಂಸಾಚಾರ ಕೃತ್ಯಗಳಲ್ಲಿ ತೊಡಗಿಸಿಕೊಂಡರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಶಿವಾಜಿ ನಗರ ಕ್ಷೇತ್ರದಲ್ಲಿರು ಬರುವ ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳನ್ನು ಗುರುತಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ಇದಕ್ಕೆ ಪೂರಕವಾಗಿ ಇಂದು ಪುಲಕೇಶಿ ನಗರ, ಭಾರತೀ ನಗರ ಸೇರಿದಂತೆ ವಿವಿಧ ಏರಿಯಾಗಳಲ್ಲಿ, ಕೇಂದ್ರ ಅರಸೇನಾ ಪಡೆ ಹಾಗೂ ಸ್ಥಳೀಯ ಪೊಲೀಸರು ರೂಟ್ ಮಾರ್ಚ್ ಮಾಡುವ ಮೂಲಕ ಜಾಗೃತಿ ಮೂಡಿಸಲಾಗಿದೆ ಎಂದರು.