ಬೆಂಗಳೂರು: ಹಿಂದಿ ದಿವಸ್ ವಿರೋಧಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ಸಾಧ್ಯತೆ ಹಿನ್ನಲೆಯಲ್ಲಿ ನಗರದ ಕನ್ನಡಪರ ಸಂಘಟನೆಗಳ ಹೋರಾಟಗಾರರಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಹಿಂದಿ ದಿವಸ್ ವಿರೋಧಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ: ಪೊಲೀಸರಿಂದ ಹೋರಾಟಗಾರರಿಗೆ ನೋಟಿಸ್ - Police notice
ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಕನ್ನಡಪರ ಹೋರಾಟಗಾರರು ವಾಸವಾಗಿರುವ ಆಯಾ ಠಾಣೆ ಇನ್ಸ್ಸ್ಪೆಕ್ಟರ್ಗಳಿಂದ ನೀಡಿರುವ ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.
ಪೊಲೀಸರಿಂದ ಹೋರಾಟಗಾರರಿಗೆ ನೋಟಿಸ್
ವಂದೇಮಾತರಂ ಸೇವಾ ಸಂಸ್ಥೆ, ಸರ್ವ ಸಂಘಟನೆಗಳ ಒಕ್ಕೂಟ ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರಿಗೆ ಪೊಲೀಸ್ ನೋಟಿಸ್ ನೀಡಿದ್ದು, ಕೇಂದ್ರ ಸರ್ಕಾರದ ಸಂಸ್ಥೆಗಳ ಬಳಿ ಪ್ರತಿಭಟಿಸಬಾರದು, ಸರ್ಕಾರಿ ಕಚೇರಿ ಅಧಿಕಾರಿ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಬಾರದು ಎಂದು ತಾಕೀತು ಮಾಡಿದ್ದಾರೆ.
ಕಚೇರಿಯ ನಾಮಫಲಕಗಳಿಗೆ ಮಸಿ ಬಳಿಯಬಾರದು, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ನಷ್ಟವುಂಟು ಮಾಡಬಾರದು. ಇನ್ನಿತರ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದಲ್ಲಿ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ನೋಟಿಸ್ ನೀಡಲಾಗಿದೆ.