ಬೆಂಗಳೂರು:ವ್ಯಕ್ತಿವೋರ್ವನಿಗೆ ಚಾಕು ಇರಿದು ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಬಂಧಿಸಿ, ಚಾಕು ಇರಿತಕ್ಕೊಳಗಾಗಿ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಪೊಲೀಸ್ ಸಿಬ್ಬಂದಿವೋರ್ವರು ಮಾನವೀಯತೆ ಮೆರೆದಿರುರುವ ಘಟನೆ ನಗರದಲ್ಲಿ ನಡೆದಿದೆ.
ಚಾಕು ಇರಿತದಿಂದ ಗಾಯಗೊಂಡ ವ್ಯಕ್ತಿ: ಆಸ್ಪತ್ರೆಗೆ ಸೇರಿಸಿ ಪ್ರಾಣ ಉಳಿಸಿದ ಪೊಲೀಸ್ - ಚಾಕು ಇರಿತದಿಂದ ಗಾಯಗೊಂಡ ವ್ಯಕ್ತಿಯ ರಕ್ಷಣೆ ಮಾಡಿದ ಪೊಲೀಸ್
ಇಲ್ಲಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸ್ ಸಿಬ್ಬಂದಿವೋರ್ವರು ಕೂಡಲೇ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಗಿರಿನಗರ ಸರ್ಕಲ್ ಬಳಿ ಶನಿವಾರ ರಾತ್ರಿ ಟೆಂಪೋ ಟ್ರಾವೆಲ್ಸ್ನ ಚಾಲಕ ಶ್ರೀನಿವಾಸ್ ಎಂಬಾತನಿಗೆ ಚಾಕು ಇರಿದು ಪರಾರಿಯಾಗುತ್ತಿದ್ದ. ಇದನ್ನು ಗಮನಿಸಿದ ಗಿರಿನಗರ ಪೊಲೀಸ್ ಠಾಣಾ ಸಿಬ್ಬಂದಿವೋರ್ವರು ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ. ಚೆನ್ನಪಟ್ಟಣ ಮೂಲದ ಮಂಜು ಬಂಧಿತ ಆರೋಪಿ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಶ್ರೀನಿವಾಸ್ರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಬಂಧಿತ ಆರೋಪಿ ಹಾಗೂ ಶ್ರೀನಿವಾಸ್ ಪತ್ನಿ ನಡುವೆ ಸ್ನೇಹವಿತ್ತು ಎನ್ನಲಾಗಿದ್ದು, ಹೀಗಾಗಿ ಮಂಜು ಹಲ್ಲೆ ಮಾಡಲು ಮುಂದಾಗಿದ್ದಾನೆ ಅನ್ನೋದು ಪೊಲೀಸ್ ವಿಚಾರಣೆಯಿಂದ ತಿಳಿದು ಬಂದಿದೆ. ಈ ಕುರಿತು ತನಿಖೆ ಮುಂದುವರೆದಿದೆ.