ಬೆಂಗಳೂರು: ನಾಗವಾರದಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆ ಸದ್ಯ ಏರಿಯಾವನ್ನ ಕಂಟೇನ್ಮೆಂಟ್ ವಲಯವನ್ನಾಗಿ ಪರಿಗಣಿಸಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಕಂಟೇನ್ಮೆಂಟ್ ಝೋನ್ ನಾಗವಾರಕ್ಕೆ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ - ಬೆಂಗಳೂರಿನ ನಾಗವಾರದಲ್ಲಿ ಕೊರೊನಾ ಪತ್ತೆ
ಬೆಂಗಳೂರಿನ ನಾಗವಾರದಲ್ಲಿ ಕೊರೊನಾ ಸೋಂಕು ಪ್ರಕರಣ ಪತ್ತೆಯಾದ ಹಿನ್ನೆಲೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆ.ಜಿ.ಹಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ನಾಗರವಾರ ವಾರ್ಡ್ನಲ್ಲಿ ನಿನ್ನೆ ಹೊಸದಾಗಿ P-1270 ವ್ಯಕ್ತಿಗೆ ಕೊರೊನಾ ವೈರಸ್ ತಗುಲಿದೆ. ಹೀಗಾಗಿ ಪೂರ್ವ ವಿಭಾಗದ ಡಿಸಿಪಿ ಡಾ. ಎಸ್.ಡಿ.ಶರಣಪ್ಪ ಭೇಟಿ ನೀಡಿ ಕಂಟೇನ್ಮೆಂಟ್ ವಲಯದಲ್ಲಿ ಕೈಗೊಂಡಿರುವ ಕಾನೂನು ಸುವ್ಯವಸ್ಥೆ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಜನರು ವಿನಾ ಕಾರಣ ಓಡಾಟ ನಡೆಸಬಾರದೆಂದು ಎಚ್ಚರಿಕೆ ನೀಡಿದ್ದಾರೆ.
ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಸೀಲ್ ಡೌನ್ ಮಾಡಿ ಸೋಂಕಿತ ವ್ಯಕ್ತಿಯಿಂದ 3 ಪ್ರಾಥಮಿಕ ಸಂಪರ್ಕಿತರು ಹಾಗೂ 50 ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಹೋಟೆಲ್‌ಗಳಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸದ್ಯ ಜನರ ಓಡಾಡಕ್ಕೆ ಬ್ರೇಕ್ ಹಾಕಲು ಹಾಗೂ ಜಾಗೃತಿ ಮೂಡಿಸಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.