ಬೆಂಗಳೂರು: ಭಾನುವಾರ ರಾತ್ರಿ ಪಾದರಾಯನಪುರದಲ್ಲಿ ನಡೆದ ಘಟನೆಯಿಂದ ಎಚ್ಚೆತ್ತ ಕೆ.ಆರ್. ಪುರ ಪೊಲೀಸರು, ಮುಂಜಾಗ್ರತಾ ಕ್ರಮವಾಗಿ ಠಾಣಾ ವ್ಯಾಪ್ತಿಯಲ್ಲಿ ಪರೇಡ್ ಮಾಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಹೊರಗಡೆ ಬಾರದಂತೆ ಎಚ್ಚರಿಕೆ ನೀಡಿದ್ದಾರೆ.
ಕೆ.ಆರ್.ಪುರದಲ್ಲಿ ಪೊಲೀಸರ ಪರೇಡ್: ಸಾರ್ವಜನಿಕರು ಹೊರಗಡೆ ಬಾರದಂತೆ ಎಚ್ಚರಿಕೆ - Police Parade in KR puram
ಕೆ.ಆರ್. ಪುರದಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಠಾಣಾ ವ್ಯಾಪ್ತಿಯಲ್ಲಿ ಪರೇಡ್ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕರು ಹೊರಗಡೆ ಬಾರದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೆ.ಆರ್.ಪುರದಲ್ಲಿ ಪೊಲೀಸರ ಪರೇಡ್
ಕೆ.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಹಾಗೂ ಗಲಭೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ, ಏರಿಯಾಗಳಾದ ಕೆ.ಆರ್.ಪುರ, ದೇವಸಂದ್ರ, ಮಸೀದಿ ರೋಡ್, ಟೆಂಟ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪರೇಡ್ ಮಾಡಿದ್ದಾರೆ.
ಕೊರೊನಾ ಮಹಾಮಾರಿ ಅಟ್ಟಹಾಸ ದಿನದಿಂದ ದಿನಕ್ಕೆ ಮುಂದುವರೆದಿದ್ದು, ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ನಾಳೆಯಿಂದ ಕೆ.ಆರ್. ಪುರ ದಲ್ಲಿ ಲಾಕ್ಡೌನ್ ಇನ್ನಷ್ಟು ಕಠಿಣಗೊಳಿಸಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.