ಬೆಂಗಳೂರು: ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಇದಕ್ಕಾಗಿ ಪೊಲೀಸರು ಹಾಗೂ ಮಾರ್ಷಲ್ಗಳು ಮಾಸ್ಕ್ ಧರಿಸದ ಸಾರ್ವಜನಿಕರನ್ನು ಹಿಡಿದು ದಂಡ ವಸೂಲಿ ಮಾಡುತ್ತಿದ್ದಾರೆ.
ಪೊಲೀಸರ ಕ್ರಮಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದ್ದರೂ ಪೊಲೀಸರಿಗೆ ಟಾರ್ಗೆಟ್ ನೀಡಿ ದಂಡ ವಸೂಲಿಗೆ ಸೂಚಿಸಲಾಗಿದೆ. ಆದರೆ ಈ ನಡುವೆ ಮಾಸ್ಕ್ ಹಾಕದವರಿಗೆ ದಂಡ ವಿಧಿಸುವ ಪೊಲೀಸರೇ ಮಾಸ್ಕ್ ಧರಿಸದೇ ಇರುವ ವೀಡಿಯೊ ದೊರೆತಿದೆ.