ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೇಂದ್ರ ವಿಭಾಗದ ಡಿಸಿಪಿ ಅನುಚೇತ್ ಭದ್ರತೆಯ ನೇತೃತ್ವ ವಹಿಸಿದ್ದಾರೆ.
ಸಚಿವ ಕೆ.ಎಸ್.ಈಶ್ವರಪ್ಪ ಅಪಾರ ಪ್ರಮಾಣದ ಬೆಂಬಲಿಗರ ಜೊತೆಯಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ರಸ್ತೆಯ ನಿವಾಸದ ಬಳಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಹಲವಾರು ಬಿಎಂಟಿಸಿ ಬಸ್ಗಳನ್ನು ಸಹ ಸ್ಥಳದಲ್ಲಿ ನಿಯೋಜಿಸಲಾಗಿದೆ.