ಬೆಂಗಳೂರು:ರಾಜ್ಯದಲ್ಲಿ ಅನ್ಲಾಕ್ ಜಾರಿಯಾಗುತ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ನಗರ ಪೂರ್ವ ವಿಭಾಗದ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹಲಸೂರು, ಬಾಣಸವಾಡಿ ಹಾಗೂ ಕಾಡುಗೊಂಡನಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳಿಂದ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳಿಗೆ ಖುದ್ದು ಭೇಟಿ ನೀಡಿದ ಪೊಲೀಸರು, ಯಾವುದೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳದಂತೆ ಸೂಚನೆ ನೀಡಿದ್ದಾರೆ.