ಬೆಂಗಳೂರು :ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆ ಅಡಿ ಪೊಲೀಸರ ತನಿಖಾ ವರದಿಯನ್ನು ಪಡೆಯುವ ಹಕ್ಕು ಇದೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಪ್ರಕರಣವೊಂದರಲ್ಲಿ ಸಿಐಡಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಹಿನ್ನೆಲೆ ತನಿಖಾ ವರದಿ ಕೇಳಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ್ದ ಸಿಐಡಿ ಮಾಹಿತಿ ಅಧಿಕಾರಿ ಬಿ ರಿಪೋರ್ಟ್ ವರದಿ ಪ್ರತಿ ನೀಡಲು ನಿರಾಕರಿಸಿದ್ದರು.
ನಂತರ ಮಾಹಿತಿ ಹಕ್ಕು ಆಯೋಗಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಮಾಹಿತಿ ಹಕ್ಕು ಆಯೋಗ ಮಾಹಿತಿ ನೀಡುವಂತೆ ಆದೇಶಿಸಿತ್ತು. ಮಾಹಿತಿ ಹಕ್ಕು ಆಯೋಗದ ಈ ಆದೇಶ ಪ್ರಶ್ನಿಸಿ ಸಿಐಡಿ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು.
ಸಿಐಡಿಯ ರಿಟ್ ಅರ್ಜಿ ವಜಾಗೊಳಿಸಿರುವ ನ್ಯಾ. ಎನ್ ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ರಾಜ್ಯ ಮಾಹಿತಿ ಆಯುಕ್ತರ ಆದೇಶ ಎತ್ತಿ ಹಿಡಿದಿದೆ. ತನಿಖಾ ಹಂತದಲ್ಲಿ ಮಾಹಿತಿ ನೀಡದಂತೆ ನಿರ್ಬಂಧ ಇದೆ. ಆದರೆ, ತನಿಖೆ ಪೂರ್ಣಗೊಂಡ ಬಳಿಕ ಆರ್‌ಟಿಐ ಕಾಯ್ದೆ ಅಡಿ ಮಾಹಿತಿ ಪಡೆಯಬಹುದು ಎಂದು ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಓದಿ:ವಿಶ್ವಪ್ರಿಯ ಫೈನಾನ್ಸ್ ವಂಚನೆ ಪ್ರಕರಣ : ತನಿಖೆ ಜವಾಬ್ದಾರಿ ಸಿಐಡಿಗೆ