ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಸಮೀಪ ಸ್ಫೋಟ ಸಂಭವಿಸಿದ ಹಿನ್ನೆಲೆ ಬೆಂಗಳೂರಿನಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ - ಹಲಸೂರು ಪೊಲೀಸ್ ಠಾಣೆ
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಿಲೇನಿಯಂ ಟವರ್ಸ್ನಲ್ಲಿನ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ದೆಹಲಿಯ ಔರಂಗಾಜೇಬ್ ರಸ್ತೆಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟ ಸಂಭವಿಸಿತ್ತು.
![ದೆಹಲಿಯ ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಫೋಟ: ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ police security for the Israeli embassy in Bengaluru](https://etvbharatimages.akamaized.net/etvbharat/prod-images/768-512-10429212-199-10429212-1611935205945.jpg)
ಬೆಂಗಳೂರಿನ ಕಚೇರಿಗೆ ಬಿಗಿ ಭದ್ರತೆ
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಿಲೇನಿಯಂ ಟವರ್ಸ್ನಲ್ಲಿನ ಇಸ್ರೇಲ್ ರಾಯಭಾರ ಕಚೇರಿಗೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಇಸ್ರೇಲ್ ದೂತವಾಸ ಕಚೇರಿಯ ಸುತ್ತಮುತ್ತ ಭದ್ರತೆ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ತಗೆದುಕೊಳ್ಳಲಾಗಿದೆ. ಹಲಸೂರು ಠಾಣೆ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಇದನ್ನೂ ಓದಿ:ದೆಹಲಿ ಇಸ್ರೇಲ್ ರಾಯಭಾರ ಕಚೇರಿ ಎದುರು ಐಇಡಿ ಸ್ಫೋಟ: ಕೆಲವು ಕಾರುಗಳು ಜಖಂ