ಬೆಂಗಳೂರು: ಎರಡನೇ ಅಲೆಯ ಕೊರೊನಾ ಎಲ್ಲೆಡೆ ರಣಕೇಕೆ ಹಾಕುತ್ತಿದ್ದು, ಸೋಂಕು ಹಬ್ಬುವಿಕೆ ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್‌ಡೌನ್ ಘೋಷಿಸಿ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಲ್ಲಿ 519 ವಾಹನ ಜಪ್ತಿ: ನಾಲ್ವರ ವಿರುದ್ಧ ಎಫ್ಐಆರ್
ಲಾಕ್‌ಡೌನ್ ಘೋಷಣೆ ಆಗುತ್ತಿದ್ದಂತೆ ನಗರ ಪೋಲಿಸರು ಜನರು ಸುಖಾ ಸುಮ್ಮನೆ ಮನೆಯಿಂದ ಹೊರಗೆ ಬಾರದಂತೆ ತಡೆಯಲು ಹಲವು ನಿಯಮಗಳನ್ನು ಸೂಚಿಸಿದ್ದರು. ಇದನ್ನು ಧಿಕ್ಕರಿಸಿ ರಸ್ತೆಗಿಳಿದವರ ಮೇಲೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಲಾಕ್‌ಡೌನ್ ಘೋಷಣೆ ಆಗುತ್ತಿದ್ದಂತೆ ನಗರ ಪೋಲಿಸರು ಜನರು ಸುಖಾ ಸುಮ್ಮನೆ ಮನೆಯಿಂದ ಹೊರಗೆ ಬಾರದಂತೆ ತಡೆಯಲು ಹಲವು ನಿಯಮಗಳನ್ನು ಸೂಚಿಸಿದ್ದರು. ಇದನ್ನು ಧಿಕ್ಕರಿಸಿ ರಸ್ತೆಗಿಳಿದವರ ಮೇಲೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಲಾಕ್‌ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಕೈಗೊಂಡ ಕ್ರಮಗಳ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಬೆಳಗ್ಗೆ 6 ಗಂಟೆಯಿಂದ ಸಂಜೆ 8ರವರೆಗೆ ಕಾರ್ಯಾಚರಣೆ ನಡೆಸಿ 6ನೇ ದಿನದ ಲಾಕ್‌ಡೌನ್‌ನಲ್ಲಿ ಒಟ್ಟು 519 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ದ್ವಿಚಕ್ರ ವಾಹನ- 470 ಆಟೋ-22 ಹಾಗೂ 27 ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ನಾಲ್ವರ ವಿರುದ್ಧ ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘನೆಯ ಪ್ರಕರಣ ಮಾಡಲಾಗಿದ್ದು, ಎನ್ಡಿಎಂಎ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.