ಬೆಂಗಳೂರು:ನಗರದಲ್ಲಿ ಪೊಲೀಸ್ ಸರ್ಪಗಾವಲು ಇನ್ನೂ 24 ಗಂಟೆಗಳ ಕಾಲ ಮುಂದುವರೆಯಲಿದೆ. ಇಂದು ಈದ್ ಮಿಲಾದ್ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆ ಮುಂದುವರೆಯಲಿದೆ.
ಬೆಂಗಳೂರಲ್ಲಿ ಇಂದು ಕೂಡ ಮುಂದುವರೆಯಲಿದೆ ಪೊಲೀಸ್ ಸರ್ಪಗಾವಲು - ಅಯೋಧ್ಯೆ ತೀರ್ಪು ಹಿನ್ನೆಲೆ ಪೊಲೀಸ್ ಸರ್ಪಗಾವಲು
ಇಂದು ಈದ್ ಮಿಲಾದ್ ಆಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಕೂಡ ಮುಂದುವರೆಯಲಿದೆ ಪೊಲೀಸ್ ಸರ್ಪಗಾವಲು
ಅಯೋಧ್ಯೆ ತೀರ್ಪು ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇಂದು ಈದ್ ಮಿಲಾದ್ ಆಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈದ್ ಮಿಲಾದ್ ಹಬ್ಬದ ಪ್ರಯುಕ್ತ ಇಂದು ಬೆಂಗಳೂರಿನಾದ್ಯಂತ ಮದ್ಯ ಮಾರಾಟ ಬಂದ್ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಮುಂಜಾನೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ ಮಾರಾಟ ನಿಷೇಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶಿಸಿದ್ದಾರೆ.