ಕರ್ನಾಟಕ

karnataka

ETV Bharat / state

ರೈತರ ಪಂಪ್​ಸೆಟ್​ಗಳಿಗೆ ಸೌರ ವಿದ್ಯುತ್‍ ಸಂಪರ್ಕ ಕಲ್ಪಿಸುವ ಸಂಬಂಧ ಶೀಘ್ರದಲ್ಲೇ ನೀತಿ: ಸಚಿವ ಕೆ ಜೆ ಜಾರ್ಜ್

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್​ ಅವರು ವಿಧಾನಸಭೆಯಲ್ಲಿ ಇಂದು ತಿಳಿಸಿದ್ದಾರೆ.

By

Published : Jul 6, 2023, 9:36 PM IST

ಇಂಧನ ಸಚಿವ ಕೆ ಜೆ ಜಾರ್ಜ್
ಇಂಧನ ಸಚಿವ ಕೆ ಜೆ ಜಾರ್ಜ್

ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರೈತರ ಪಂಪ್‌ ಸೆಟ್​ಗಳಿಗೆ ಸೌರ ವಿದ್ಯುತ್‍ ಸಂಪರ್ಕ ಕಲ್ಪಿಸುವ ಸಂಬಂಧ ಶೀಘ್ರದಲ್ಲೇ ನೀತಿಯೊಂದನ್ನು ರೂಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಆಡಳಿತ ಪಕ್ಷದ ಹಿರಿಯ ಸದಸ್ಯ ಟಿ ಬಿ ಜಯಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರು ಪಂಪ್‍ ಸೆಟ್‍ಗಳಿಗೆ ಸೌರ ವಿದ್ಯುತ್‍ ಸಂಪರ್ಕ ಅಳವಡಿಸಿಕೊಳ್ಳಲು ಸುಮಾರು 4.5 ಲಕ್ಷ ರೂ. ಖರ್ಚಾಗಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸುಮಾರು 3.5 ಲಕ್ಷ ರೂಪಾಯಿ ಸಹಾಯಧನದ ರೂಪದಲ್ಲಿ ದೊರೆಯಲಿದೆ. ಇನ್ನೊಂದು ಲಕ್ಷ ರೂ. ವನ್ನು ರೈತರು ಭರಿಸುವುದು ಕಷ್ಟವಾಗಲಿದೆ ಎಂಬುದನ್ನು ಮನಗಂಡಿರುವ ಸರ್ಕಾರ, ಯಾವುದಾದರೂ ಬ್ಯಾಂಕ್‍ ಮೂಲಕ ಸಾಲ ಸೌಲಭ್ಯ ಕಲ್ಪಿಸಲು ಚಿಂತನೆ ನಡೆಸಿದೆ ಎಂದರು.ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ನೀತಿಯೊಂದನ್ನು ಜಾರಿಗೊಳಿಸಲು ಗಂಭೀರ ಚಿಂತನೆ ನಡೆದಿದೆ ಎಂದು ಹೇಳಿದರು.

ರೈತರು ರಾಜ್ಯದ ಜೀವನಾಡಿಯಾಗಿದ್ದು, ಅವರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರೈತರ ಪಂಪ್‍ಸೆಟ್‍ಗಳಿಗೆ ನಿರಂತರ ವಿದ್ಯುತ್‍ ಪೂರೈಕೆಗೆ ಏನೆಲ್ಲಾ ಮಾಡಬಹುದು ಎಂಬ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ಅಕ್ರಮ - ಸಕ್ರಮ ಯೋಜನೆ ಒಂದು ಬಾರಿಗೆ ಮಾತ್ರ ಸೂಕ್ತವಾಗಿದ್ದು, ಎಲ್ಲಾ ಕಾಲಕ್ಕೂ ಈ ಯೋಜನೆ ಅನ್ವಯ ಮಾಡುವುದು ಕಷ್ಟವಾಗುತ್ತದೆ ಎಂದರು.

ಅಕ್ರಮ –ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಇತ್ಯರ್ಥಕ್ಕಾಗಿ ಬಾಕಿ ಇದ್ದು, ಅವುಗಳನ್ನು ಆದ್ಯತೆ ಮೇಲೆ ಬಗೆಹರಿಸಲು ಪ್ರಯತ್ನಿಸಲಾಗುವುದು. ರೈತರ ಕೃಷಿ ಪಂಪ್‍ಸೆಟ್‍ಗಳಿಗೆ ಸಹಾಯಧನದ ರೂಪದಲ್ಲಿ 16 ಸಾವಿರ ಕೋಟಿ ರೂ. ನೀಡಲಾಗುತ್ತಿದೆ ಎಂದು ಹೇಳಿದರು. ಇದಕ್ಕೂ ಮುನ್ನ ಪ್ರಶ್ನೆ ಕೇಳಿದ ಸದಸ್ಯರಾದ ಜಯಚಂದ್ರ, ಷಡಕ್ಷರಿ, ಚಂದ್ರ ಅವರು, ಇಡೀ ರಾಜ್ಯಾದ್ಯಂತ ಈ ಸಮಸ್ಯೆ ಇದ್ದು, ಅಕ್ರಮ - ಸಕ್ರಮ ಯೋಜನೆಯಡಿ ಬಾಕಿ ಇರುವ ಅರ್ಜಿಗಳನ್ನು ಶೀಘ‍್ರ ವಿಲೇವಾರಿ ಮಾಡಬೇಕು ಎಂದು ಒತ್ತಾಯಿಸಿದರು.

ನಿಯಮ ಉಲ್ಲಂಘಿಸಿದ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮ : ಬೀದರ್ ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಮಾಲಿನ್ಯ ನಿಯಂತ್ರಣದ ನಿಯಮಗಳನ್ನು ಉಲ್ಲಂಘಿಸಿರುವ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು, ಪ್ರಶ್ನೋತ್ತರ ವೇಳೆ ಶಾಸಕ ಸಿದ್ದು ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದರು.

ಈ ಕೈಗಾರಿಕಾ ಪ್ರದೇಶದಲ್ಲಿ 25 ಕೆಂಪು ವರ್ಗದ ಕೈಗಾರಿಕೆಗಳಿವೆ. 7 ಕೈಗಾರಿಕೆಗಳನ್ನು ಮುಚ್ಚಲು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿತ್ತು. ಆ ಕೈಗಾರಿಕೆಗಳು ನ್ಯಾಯಾಲಯದ ಮೊರೆ ಹೋಗಿರುವುದರಿಂದ ಪುನರ್ ಪರಿಶೀಲನೆ ಮಾಡಲಾಗುತ್ತಿದೆ ಎಂದರು.

ಕೈಗಾರಿಕಾ ಪ್ರದೇಶಕ್ಕೆ ಮಾಲಿನ್ಯದ ಗುಣಮಟ್ಟ ಪತ್ತೆಹಚ್ಚುವ ಸಂಚಾರಿ ವಾಹನ: ರಾಸಾಯನಿಕ ಕಾರ್ಖಾನೆಗಳು ಸಂಸ್ಕರಿಸದ ತ್ಯಾಜ್ಯ ನೀರನ್ನು ಬಿಡುತ್ತಿದ್ದು, ಮಾಲಿನ್ಯ ಮಂಡಳಿಯ ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಹುಮ್ನಾಬಾದ್ ಕೈಗಾರಿಕಾ ಪ್ರದೇಶಕ್ಕೆ ಮಾಲಿನ್ಯದ ಗುಣಮಟ್ಟ ಪತ್ತೆಹಚ್ಚುವ ಸಂಚಾರಿ ವಾಹನವೊಂದನ್ನು ಒದಗಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ:ಮುಂಗಾರು ಮಳೆ ಕೊರತೆ ಮುಂದುವರಿದರೆ, ಬರಪೀಡಿತ ಪ್ರದೇಶಗಳ ಘೋಷಣೆಗೆ ಪರಿಶೀಲನೆ: ಸಚಿವ ಕೃಷ್ಣಬೈರೇಗೌಡ

ABOUT THE AUTHOR

...view details