ಕರ್ನಾಟಕ

karnataka

ETV Bharat / state

ಸುತ್ತೂರು ಶ್ರೀಗಳ ಮಾತೃಶ್ರೀ, ನಿರ್ಮಾಪಕ ಚಂದ್ರು ನಿಧನ: ಸಿಎಂ, ಕೈ ನಾಯಕರಿಂದ ಸಂತಾಪ

ಸುತ್ತೂರು ಶ್ರೀಗಳ ಮಾತೃಶ್ರೀ ಹಾಗೂ ನಿರ್ಮಾಪಕ ಕೆ.ಸಿ.ಎನ್​ ಚಂದ್ರು ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

Political Leaders Condolence
ಸಿಎಂ ಬಿಎಸ್​​ವೈ ಸಂತಾಪ

By

Published : Jun 14, 2021, 11:43 AM IST

ಬೆಂಗಳೂರು:ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ವಿತರಕ ಕೆ.ಸಿ ಎನ್ ಚಂದ್ರು ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಧ್ಯಾತ್ಮಿಕ ಸಾಧನೆಯಲ್ಲಿ ಶಿವವನಾಗಮ್ಮ ಅವರು ಗಾಢ ಪ್ರಭಾವ ಬೀರಿದ್ದರು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು, ತಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದರು. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್​ ನಾಯಕರಿಂದ ಸಂತಾಪ:ಸುತ್ತೂರು ಶ್ರೀಗಳ ಪೂರ್ವಾಶ್ರಮದ ಮಾತೃಶ್ರೀಯವರಾದ ಶ್ರೀಮತಿ ಶಿವನಾಗಮ್ಮ ಅವರು ಲಿಂಗೈಕ್ಯರಾಗಿರುವ ಸುದ್ದಿ ಕೇಳಿ ಬಹಳ ಬೇಸರವಾಗಿದೆ. 90 ವರ್ಷಗಳ ಕಾಲ ಸಾರ್ಥಕ ಜೀವನ ನಡೆಸಿದ ಶಿವನಾಗಮ್ಮ ಅವರು ತಮ್ಮ ಆರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ಕೊಟ್ಟು ಸಮಾಜದ ಆಸ್ತಿಯಾಗಿ ಬೆಳೆಸಿದ ಮಹಾನ್ ಮಾತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ದಣಿವರಿಯದ ದಯಾಮಯಿ, ಪರಮಪೂಜ್ಯ ಜಗದ್ಗುರುಗಳಾದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮನವರು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮನವರು ಲಿಂಗೈಕ್ಯರಾದ ಸುದ್ದಿ ತಿಳಿದು ದುಃಖವಾಯಿತು. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ನೀಡಲಿ, ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details