ಬೆಂಗಳೂರು :ಯಾವ ಕಾರಣಕ್ಕೆ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ಕೊಟ್ಟಿದ್ದಾರೆಯೋ ಗೊತ್ತಿಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಹೇಳಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್ ಆರ್ ಪಾಟೀಲ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸಂಪ್ರದಾಯ, ಘನತೆ ಗೌರವ ಹೆಚ್ಚಿಸುವ ಕೆಲಸ ಮಾಡಿದ್ದಾರೆ. ಕುರ್ಚಿಯಿಂದ ಗೌರವ ಬರೋದಲ್ಲ. ವ್ಯಕ್ತಿಯಿಂದ ಕುರ್ಚಿಗೆ ಗೌರವ ಬರಬೇಕು.
ಪರಿಷತ್ನಲ್ಲಿ ಚರ್ಚೆಗೆ ಬಂದ ಸಂದರ್ಭದಲ್ಲಿ ನಿರ್ಣಯ ಮಾಡುತ್ತೇವೆ. ಯಾವುದೋ ರಾಜಕೀಯ ಕಾರಣಕ್ಕಾಗಿ ನೋಟಿಸ್ ನೀಡಲಾಗಿದೆ ಎಂಬುದು ನಮ್ಮ ಭಾವನೆ. ಈ ಕುರಿತು ಇಂದಿನ ಹಿರಿಯ ನಾಯಕರ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಇದನ್ನೂ ಓದಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ತರಾತುರಿ ಯಾಕೆ?: ಅರುಣ್ ಸಿಂಗ್ ಪ್ರಶ್ನೆ
ಕಾಂಗ್ರೆಸ್ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಕುಮಾರಸ್ವಾಮಿಯವರಿಗೆ ಸಿಎಂ ಆಗುವ ಅವಕಾಶ ಸಿಕ್ಕಿತ್ತು. ಕಾಂಗ್ರೆಸ್ ಜೊತೆ ಬರದಿದ್ದರೆ ಅವರಿಗೆ ಸಿಎಂ ಆಗೋ ಅವಕಾಶ ಸಿಗುತ್ತಿರಲಿಲ್ಲ. ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ವಿಧಾನಪರಿಷತ್ನಲ್ಲಿ ಸಭಾಪತಿ ಸ್ಥಾನ ಉಳಿಸಿಕೊಳ್ಳಲು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ನಮ್ಮ ಹಿರಿಯ ನಾಯಕರ ಸಭೆಯಲ್ಲಿ ಚರ್ಚಿಸಿ ಮುಂದಿನ ಯೋಚನೆ ಮಾಡುತ್ತೇವೆ.
ಜೆಡಿಎಸ್ ನಮ್ಮ ಜೊತೆ ಬಂದಿದ್ದರಿಂದಲೇ ಅಧಿಕಾರ ಸಿಕ್ಕಿದ್ದು, ಇಲ್ಲವಾದರೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಕಾಂಗ್ರೆಸ್ ಜೊತೆ ಕೈಜೋಡಿಸಿ ತಪ್ಪು ಮಾಡಿದೆ ಎಂದು ಯಾಕೆ ಅವರು ಹೇಳಿದ್ದಾರೆ ಅನ್ನುವುದು ಅವರೇ ವಿವರಿಸಬೇಕು ಎಂದರು.